Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ದುಷ್ಟರು ಎಲ್ಲಿಯವರೆಗೆ, ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ದುಷ್ಟರು ಎಲ್ಲಿಯವರೆಗೆ, ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಲ್ಲಿಯವರೆಗೆ ಪ್ರಭು, ಎಲ್ಲಿಯವರೆಗೆ? I ದುರುಳರು ಹಿಗ್ಗುತ್ತಲೆ ಇರಬೇಕು ಹೀಗೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು? ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರೇ, ಎಲ್ಲಿಯವರೆಗೆ? ದುಷ್ಟರು ಎಷ್ಟರವರೆಗೆ ಹಿಗ್ಗುತ್ತಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:3
16 ತಿಳಿವುಗಳ ಹೋಲಿಕೆ  

ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ದುಷ್ಟರ ಉತ್ಸಾಹಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆ ಕೊಚ್ಚುತ್ತಾರೆ.


ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಯಾಕೆ ನನ್ನನ್ನು ತಳ್ಳಿಬಿಟ್ಟಿ? ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?


ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಣಗಿಕೋ! ಶಾಂತಿಗೊಳ್ಳು, ಸುಮ್ಮನಿರು!


ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?


ಸೇನಾಧೀಶ್ವರನಾದ ಯೆಹೋವದೇವರೇ, ನಿನಗೆ ಮೊರೆಯಿಡುವ ನಿನ್ನ ಪ್ರಜೆಗೆ ಇನ್ನೆಷ್ಟರವರೆಗೆ ಮುನಿದಿರುವಿ?


ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲೇ ಇರಬೇಕೋ?


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಆಕೆಯು - ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಈ ದುಷ್ಟ ಹಾಮಾನನೇ ಅಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಬೆಪ್ಪಾದನು.


ಯೆಹೋವನೇ, ನಾನು ಮೊರೆಯಿಡುತ್ತಿದ್ದರೂ ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೆ ಇರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು