Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:5 - ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವಾಸ್ತ್ಯವನ್ನು ಕುಗ್ಗಿಸಿಬಿಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಸುಕಿ ಹಾಕುತಿಹರು ನಿನ್ನ ಪ್ರಜೆಯನು I ಹಿಂಸಿಸುತಿಹರು ನಿನ್ನ ಸ್ವಕೀಯರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ಅವರು ನಿನ್ನ ಜನರಿಗೆ ಕೇಡುಮಾಡಿದ್ದಾರೆ. ಅವರು ನಿನ್ನ ಜನರನ್ನು ಹಿಂಸೆಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನಿಮ್ಮ ಜನರನ್ನು ಅವರು ಕುಗ್ಗಿಸುತ್ತಾರೆ. ನಿಮ್ಮ ಬಾಧ್ಯತೆಯನ್ನು ಬಾಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:5
20 ತಿಳಿವುಗಳ ಹೋಲಿಕೆ  

ನೀವು ನನ್ನ ಜನರನ್ನು ಜಜ್ಜಿ ಬಡವರ ಮುಖವನ್ನು ಹಿಂಡುವದೇಕೆ ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.


ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


[ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ.


ನನ್ನ ಸ್ವಾಸ್ತ್ಯವನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವದರಿಂದ


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.


ಈಗಲೂ ಅನ್ಯರು ನನ್ನ ಜನರನ್ನು ಹಕ್ಕಿಲ್ಲದೆ ಒಯ್ದಿರಲು ನಾನು ಇಲ್ಲಿ ಸುಮ್ಮನಿರುವದು ಹೇಗೆ? ನನ್ನ ಪ್ರಜೆಯನ್ನು ಆಳುವವರು [ರೌದ್ರದಿಂದ] ಕಿರಚುತ್ತಾರೆ; ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ಅವರು ಯಾಕೋಬ್‍ವಂಶದವರನ್ನು ನುಂಗಿಬಿಟ್ಟು ಅವರ ವಾಸಸ್ಥಳಗಳನ್ನು ಹಾಳುಮಾಡಿದರಲ್ಲಾ.


ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ ಅಂದುಕೊಂಡಿದ್ದಾರೆ; ದೇಶದಲ್ಲಿರುವ ಎಲ್ಲಾ ದೇವಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.


ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.


ದುಷ್ಟತ್ವವನ್ನು ನಡಿಸುವವರೆಲ್ಲರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವದಿಲ್ಲ.


ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.


ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವದು, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ?


ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು