Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:9 - ಕನ್ನಡ ಸತ್ಯವೇದವು J.V. (BSI)

9 ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಿವಿಮಾಡಿದವನು ಕೇಳದಿರುವನೋ? I ಕಣ್ಣುಕೊಟ್ಟವನು ನೋಡದಿರುವನೋ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಿವಿಗಳನ್ನು ಸೃಷ್ಟಿಸಿದಾತನಿಗೆ, ಕೇಳುವುದಿಲ್ಲವೇ? ಕಣ್ಣುಗಳನ್ನು ಸೃಷ್ಟಿಸಿದಾತನಿಗೆ ಕಾಣುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕಿವಿಯನ್ನು ನಿರ್ಮಿಸಿದ ದೇವರು ಕೇಳದಿರುವರೇ? ಕಣ್ಣನ್ನು ರೂಪಿಸಿದವರು ನೋಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:9
12 ತಿಳಿವುಗಳ ಹೋಲಿಕೆ  

ಮನುಷ್ಯರಿಗೆ ಬಾಯಿ ಕೊಟ್ಟವರಾರು? ಒಬ್ಬನು ಮೂಕನಾಗಿ ಮತ್ತೊಬ್ಬನು ಕಿವುಡನಾಗಿ ಒಬ್ಬನು ಕಣ್ಣುಳ್ಳವನಾಗಿ ಮತ್ತೊಬ್ಬನು ಕಣ್ಣಿಲ್ಲದವನಾಗಿ ಇರಬೇಕೆಂದು ನೇವಿುಸಿದವರಾರು? ಯೆಹೋವನಾಗಿರುವ ನಾನಲ್ಲವೇ.


ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.


ಹೃದಯರಹಸ್ಯಗಳನ್ನು ಬಲ್ಲವನಾದ ದೇವರು ವಿಚಾರಿಸುತ್ತಿರಲಿಲ್ಲವೋ?


ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.


ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ; ಇವುಗಳಿಂದ ಓಲಾಡುವವನು ಜ್ಞಾನಿಯಲ್ಲ.


ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.


ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತೆ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಹೆಚ್ಚು ಹರಟೆಗಳನ್ನು ಕೇಳಿದ್ದೇನೆ.


ದೇಹವೆಲ್ಲಾ ಕಣ್ಣಾದರೆ ಕಿವಿಯೆಲ್ಲಿ? ಅದೆಲ್ಲಾ ಕಿವಿಯಾದರೆ ಮೂಗೆಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು