Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೊಸಗೀತೆಯನು ಹಾಡಿರಿ ಪ್ರಭುವಿಗೆ I ವಿಶ್ವವೆಲ್ಲವು ಹಾಡಲಿ ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ನೂತನ ಕಾರ್ಯಗಳ ಕುರಿತಾಗಿ ಹೊಸ ಹಾಡನ್ನು ಹಾಡಿರಿ! ಭೂಲೋಕವೆಲ್ಲಾ ಯೆಹೋವನನ್ನು ಹಾಡಿಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:1
10 ತಿಳಿವುಗಳ ಹೋಲಿಕೆ  

ಯಾಹುವಿಗೆ ಸ್ತೋತ್ರ! ಯೆಹೋವನಿಗೆ ನೂತನಕೀರ್ತನೆಯನ್ನು ಹಾಡಿರಿ; ಭಕ್ತಸಭೆಯಲ್ಲಿ ಆತನನ್ನು ಸ್ತುತಿಸಿರಿ.


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡಿಸಿದ್ದಾನೆ. ಆತನ ಬಲಗೈಯೂ ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ಆತನ ಘನಕ್ಕಾಗಿ ನೂತನಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಬೇರೊಂದು ಸ್ಥಳದಲ್ಲಿ - ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳೂ ಆತನನ್ನು ಸಂಕೀರ್ತಿಸಲಿ ಎಂದೂ ಬರೆದದೆ.


ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ.


ಸರ್ವಭೂನಿವಾಸಿಗಳು ನಿನಗೆ ಎರಗಿ ಭಜಿಸುತ್ತಾ ನಿನ್ನ ನಾಮವನ್ನು ಕೀರ್ತಿಸುವರು ಎಂದು ಬಿನ್ನೈಸಿರಿ. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು