Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:13 - ಕನ್ನಡ ಸತ್ಯವೇದವು J.V. (BSI)

13 ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:13
16 ತಿಳಿವುಗಳ ಹೋಲಿಕೆ  

ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಆಳಿ ಭೂಪ್ರಜೆಗಳನ್ನೆಲ್ಲಾ ನಡಿಸುವಾತನಾಗಿರುವದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ.


ಇದಲ್ಲದೆ ಅವನು ನನಗೆ - ಈ ಪುಸ್ತಕದಲ್ಲಿರುವ ಪ್ರವಾದನವಾಕ್ಯಗಳನ್ನು ಗುಪ್ತವಾಗಿಡಬೇಡ; ಇವು ನೆರವೇರುವ ಸಮಯವು ಸಮೀಪವಾಗಿದೆ.


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಆತನು ದೇಶದೇಶಗಳ ವ್ಯಾಜ್ಯಗಳನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ [ಆಯುಧಗಳನ್ನು] ಕುಲುಮೆಗೆ ಹಾಕಿ ಕತ್ತಿಗಳನ್ನು ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು