Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:5 - ಕನ್ನಡ ಸತ್ಯವೇದವು J.V. (BSI)

5 ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ I ಪ್ರಭುವಿನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅನ್ಯಜನಾಂಗಗಳ ದೇವರುಗಳೆಲ್ಲಾ ಕೇವಲ ಪ್ರತಿಮೆಗಳಾಗಿವೆ. ನಮ್ಮ ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:5
15 ತಿಳಿವುಗಳ ಹೋಲಿಕೆ  

ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.


ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -


ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ಅನ್ಯಜನಗಳ ವಿಗ್ರಹಗಳು ಬೆಳ್ಳಿಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.


ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.


ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?


ಆಹಾ, ಇವರೆಲ್ಲಾ ಮಾಯೆ, ಇವರ ಕಾರ್ಯಗಳು ಶೂನ್ಯ, ಇವರ ಎರಕದ ಬೊಂಬೆಗಳು ಗಾಳಿಯೇ, ಹಾಳೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು