Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:4 - ಕನ್ನಡ ಸತ್ಯವೇದವು J.V. (BSI)

4 ಆತನ ವಿುಂಚುಗಳು ಲೋಕವನ್ನು ಬೆಳಗಿಸಿದವು; ಭೂವಿುಯು ಅದನ್ನು ಕಂಡು ನಡುಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಳೆಯನು ಬೆಳಗಿಸುತ್ತದೆ ಆತನ ಮಿಂಚು I ನಡುಗುತ್ತದೆ ಭೂಮಿ ಅದಕೆ ಬೆಚ್ಚುಬಿದ್ದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನ ಮಿಂಚು ಆಕಾಶದಲ್ಲಿ ಹೊಳೆಯುತ್ತದೆ. ಜನರು ಅದನ್ನು ನೋಡಿ ಭಯಗೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ಕಂಡು ನಡುಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:4
14 ತಿಳಿವುಗಳ ಹೋಲಿಕೆ  

ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ವಿುಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂವಿುಯು ಅಲ್ಲಾಡಿ ಕಂಪಿಸಿತು.


ಆತನು ದೃಷ್ಟಿಸಿದ ಮಾತ್ರದಿಂದಲೇ ಭೂವಿುಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.


ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ನಡುಗಿರಿ.


ಭೂಲೋಕವನ್ನು ಸ್ಥಳದೊಳಗಿಂದ ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ.


ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ ತನ್ನ ಸಿಡಿಲನ್ನು ಭೂವಿುಯ ಅಂಚುಗಳವರೆಗೂ ಬಿಡುವನು.


ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆಯ ಗುರುತು ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು