Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:9 - ಕನ್ನಡ ಸತ್ಯವೇದವು J.V. (BSI)

9 ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ I ಮಹೋನ್ನತನು ನೀನು ದೇವರುಗಳಿಗೆಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮಹೋನ್ನತನಾದ ಯೆಹೋವನೇ, ಭೂಲೋಕದ ಸರ್ವಾಧಿಪತಿ ನೀನೇ. ಎಲ್ಲಾ ದೇವರುಗಳಲ್ಲಿ ನೀನೇ ಮಹೋನ್ನತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ; ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:9
14 ತಿಳಿವುಗಳ ಹೋಲಿಕೆ  

ಯೆಹೋವನು ಮಹಾದೇವರೂ ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.


ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಆತನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನೇ ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ ಅಂದನು.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಯೆಹೋವನು ದೊಡ್ಡವನೆಂದೂ ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.


ಪರಲೋಕದೊಳಗೆ ಸಕಲ ರಾಜ್ಯತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿಕೊಂಡನು.


ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಭಯಂಕರನು.


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬದು ನಿಶ್ಚಯ.


ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.


ದೇವಾಧಿದೇವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ಕೃಪೆಯು ಶಾಶ್ವತವಾದದ್ದು.


ಯೆಹೋವನು ಉನ್ನತೋನ್ನತನಾಗಿದ್ದಾನೆ; ಮೇಲಿನ ಲೋಕದಲ್ಲಿ ವಾಸಿಸುತ್ತಾನಷ್ಟೆ; ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು