Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 98:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡಿಸಿದ್ದಾನೆ. ಆತನ ಬಲಗೈಯೂ ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 98:1
39 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಭುಜಬಲವು ಎಷ್ಟೋ ಘನವಾದದ್ದು; ಯೆಹೋವನೇ, ನಿನ್ನ ಭುಜಬಲವು ನಿನ್ನ ಶತ್ರುಗಳನ್ನು ಪುಡಿಪುಡಿ ಮಾಡುತ್ತದೆ.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.


ಆತನ ಘನಕ್ಕಾಗಿ ನೂತನಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.


ಜನಾಂಗಗಳಲ್ಲಿ ಆತನ ಘನತೆಯನ್ನೂ ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಆತನು ದೊರೆತನಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಜಯೋತ್ಸವ ಮಾಡುತ್ತಾನೋ ಎಂಬಂತೆ ಶಿಲುಬೆಯ ಮೇಲೆ ಅವುಗಳನ್ನು ಜಯಿಸಲ್ಪಟ್ಟವುಗಳನ್ನಾಗಿ ಮೆರಸುತ್ತಾ ತೋರಿಸಿದನು.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಅರಬೀದೇಶದವರೂ ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವದನ್ನು ಕೇಳುತ್ತೇವೆ ಅಂದುಕೊಂಡರು.


ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದದ್ದು.


ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಹೆಂಗಸು ಗಂಡಸನ್ನು ಕಾಪಾಡುವಳು.


ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣ ಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.


ಸಮುದ್ರಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನಗೀತವನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಯಾಹುವಿಗೆ ಸ್ತೋತ್ರ! ಯೆಹೋವನಿಗೆ ನೂತನಕೀರ್ತನೆಯನ್ನು ಹಾಡಿರಿ; ಭಕ್ತಸಭೆಯಲ್ಲಿ ಆತನನ್ನು ಸ್ತುತಿಸಿರಿ.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಯೆಹೋವನು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.


ನೀನು ನನ್ನನ್ನು ಅದ್ಭುತವಾಗಿಯೂ ವಿಚಿತ್ರವಾಗಿಯೂ ರಚಿಸಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.


ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆತನೊಬ್ಬನೇ ಶಕ್ತನು; ಆತನ ಕೃಪೆಯು ಶಾಶ್ವತವಾದದ್ದು.


ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,


ಮಹೋನ್ನತನೂ ಮಹತ್ಕಾರ್ಯಗಳನ್ನು ನಡಿಸುವವನೂ ನೀನು; ದೇವರು ನೀನೊಬ್ಬನೇ.


ಅದ್ಭುತಗಳನ್ನು ನಡಿಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.


ಆಗ ಇಗೋ, ಒಂದು ಬಿಳಿ ಕುದುರೆ ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಬಿಲ್ಲು ಇತ್ತು; ಅವನಿಗೆ ಜಯಮಾಲೆ ಕೊಡಲ್ಪಟ್ಟಿತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಮಹತ್ಕಾರ್ಯಗಳನ್ನು ನಡಿಸುವದರಲ್ಲಿ ಅದ್ವಿತೀಯನೂ ಇಸ್ರಾಯೇಲ್ಯರ ದೇವರೂ ಆದ ಯೆಹೋವ ದೇವರಿಗೆ ಸ್ತೋತ್ರವು.


ನೀತಿನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿಸತ್ಯತೆಗಳೇ.


ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು