Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 99:6 - ಕನ್ನಡ ಸತ್ಯವೇದವು J.V. (BSI)

6 ಆತನ ಯಾಜಕರಲ್ಲಿ ಮೋಶೆ ಆರೋನರೂ ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿಕೊಂಡಾಗೆಲ್ಲಾ ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 99:6
16 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲ್ಯರಿಗಾಗಿ ಒಂದು ನಿಯಮವನ್ನು ನಿರ್ಣಯಮಾಡಿ ಅವರನ್ನು ಪರೀಕ್ಷಿಸಿ ಹೀಗಂದನು -


ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ನನಗೆ ಮೊರೆಯಿಡುವದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲ್ಯರಿಗೆ ಹೇಳು.


ಮರುದಿನದಲ್ಲಿ ಮೋಶೆ ಜನರಿಗೆ - ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು; ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆಯು ನನ್ನ ಮೂಲಕ ದೊರಕೀತು ಎಂದು ಹೇಳಿದನು.


ಆಗ ಮೋಶೆಯು ಯೆಹೋವನಿಗೆ ಮೊರೆಯಿಟ್ಟು - ಈ ಜನರಿಗೋಸ್ಕರ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲಾ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು