Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 99:9 - ಕನ್ನಡ ಸತ್ಯವೇದವು J.V. (BSI)

9 ನಮ್ಮ ಯೆಹೋವದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವದೇವರು ಪರಿಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ. ನಮ್ಮ ದೇವರಾದ ಯೆಹೋವನೇ ಪರಿಶುದ್ಧನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ದೇವರ ಪರಿಶುದ್ಧ ಪರ್ವತದಲ್ಲಿ ಆರಾಧಿಸಿರಿ. ನಮ್ಮ ದೇವರಾದ ಯೆಹೋವ ದೇವರು ಪರಿಶುದ್ಧರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 99:9
15 ತಿಳಿವುಗಳ ಹೋಲಿಕೆ  

ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದದ್ದು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಪರಿಶುದ್ಧನಾದ ದೇವರು ಧರ್ಮವನ್ನು ನಡಿಸುವದರಲ್ಲಿ ಪರಿಶುದ್ಧನೆನಿಸಿಕೊಳ್ಳುವನು.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.


ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರು? ನಮ್ಮ ದೇವರೇ ಅಸಮಾನವಾದ ಆಶ್ರಯದುರ್ಗವು.


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ.


ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು.


ನಮ್ಮ ಯೆಹೋವದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.


ಅವರು ಯೆಹೋವನ ಪೂಜ್ಯವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು