Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:1 - ಕನ್ನಡ ಸತ್ಯವೇದವು J.V. (BSI)

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗೂ ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಸಹೋದರರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚ್ಯಾ ಇಚ್ಛ್ಯಾ ಸಾರ್ಕೆ ಕ್ರಿಸ್ತ್ ಜೆಜುಚೊ ಅಪೊಸ್ತಲ್ ಹೊವ್ನ್ ಹೊತ್ತೊ ಪಾವ್ಲು ಅನಿ ವಿಶ್ವಾಸಾತ್ ಭಾವ್ ಹೊಲ್ಲೊ ತಿಮೊತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:1
11 ತಿಳಿವುಗಳ ಹೋಲಿಕೆ  

ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲೆಲ್ಲಾ ಇರುವ ದೇವಜನರೆಲ್ಲರಿಗೂ ಬರೆಯುವದೇನಂದರೆ -


ಕ್ರಿಸ್ತ ಯೇಸುವಿನ ಸೆರೆಯವನಾಗಿರುವ ಪೌಲನೂ ಸಹೋದರನಾದ ತಿಮೊಥೆಯನೂ ನಮಗೆ ಪ್ರಿಯನೂ ಜೊತೆಕೆಲಸದವನೂ ಆಗಿರುವ ಫಿಲೆಮೋನನೆಂಬ ನಿನಗೂ


ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟ ಪೌಲನೂ ಸಹೋದರನಾದ


ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟವನೂ ದೇವರ ಸುವಾರ್ತೆಯನ್ನು ಸಾರುವದಕ್ಕೆ ನೇವಿುಸಲ್ಪಟ್ಟವನೂ ಆಗಿರುವ ಪೌಲನು


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ -


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


ಆಮೇಲೆ ಅವನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನೂ ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು