ಕೊಲೊಸ್ಸೆಯವರಿಗೆ 1:10 - ಕನ್ನಡ ಸತ್ಯವೇದವು J.V. (BSI)10 ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅನಿ ಧನಿಯಾಕ್ ಬರೆ ಹೊವ್ನ್ ಚಲುನ್, ಹರ್ ಎಕ್ ವಿಶಯಾತ್ ತೆಕಾ ಖುಶಿ ಹೊಯ್ ಸಾರ್ಕೆ ಕರುಚೆ ಮನುನ್ ತುಮಿ ಸಗ್ಳ್ಯಾ ನಮುನ್ಯಾಚೆ ಬರಿ ಕಾಮಾ ಕರಿತ್; ದೆವಾಚ್ಯಾ ಶಾನೆಪಾನಾತ್ ವಾಡುಚೆ ಮನುನ್, ಅಧ್ಯಾಯವನ್ನು ನೋಡಿ |
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.