ಕೊಲೊಸ್ಸೆಯವರಿಗೆ 1:18 - ಕನ್ನಡ ಸತ್ಯವೇದವು J.V. (BSI)18 ಸಭೆಯೆಂಬ ದೇಹಕ್ಕೆ ಆತನು ಶಿರಸ್ಸು; ಆತನು ಆದಿಸಂಭೂತನು. ಎಲ್ಲಾದರಲ್ಲಿ ಪ್ರಮುಖನಾಗುವಂತೆ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ. ಪ್ರತಿಯೊಂದೂ ಆತನಿಂದಲೇ ಬರುತ್ತದೆ. ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ. ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಕ್ರಿಸ್ತ್ ತಾಂಡೊ ಮನ್ತಲ್ಯಾ ಆಂಗಾಕ್ ಟಕ್ಲೆ ಹೊವ್ನ್ ಹಾಯ್, ಹರಿ ಎಕ್ಬಿ ತೆಚ್ಯಾಕ್ನಾಚ್ ಯೆತಾ, ಮರ್ನಾತ್ನಾ ಅದ್ದಿ ಉಟುನ್ ಯೆಲ್ಲೊ ತೊಚ್, ತಸೆ ಹೊವ್ನ್ ಸಗ್ಳ್ಯಾಕ್ನಿ ತೊಚ್ ಅದ್ದಿಚೊ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |
ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.