Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:25 - ಕನ್ನಡ ಸತ್ಯವೇದವು J.V. (BSI)

25 ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕೆಲಸವನ್ನು ನಿಮ್ಮ ಪ್ರಯೋಜನಕ್ಕೋಸ್ಕರ ನನಗೆ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಸಭೆಗೆ ಸೇವಕನಾದೆನು. ಏಕೆಂದರೆ ದೇವರು ನನಗೆ ವಿಶೇಷವಾದ ಕಾರ್ಯವನ್ನು ಮಾಡುವಂತೆ ಆಜ್ಞಾಪಿಸಿದನು. ಈ ಕಾರ್ಯವು ನಿಮಗೆ ಸಹಾಯ ಮಾಡುವುದು. ದೇವರ ಉಪದೇಶವನ್ನು ಸಂಪೂರ್ಣವಾಗಿ ತಿಳಿಸುವುದೇ ಆ ಕಾರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿಮಗೋಸ್ಕರವಾಗಿ ನನಗೆ ದೇವರು ಕೊಟ್ಟಿರುವ ಜವಾಬ್ದಾರಿಗೆ ಅನುಸಾರವಾಗಿ, ದೇವರ ವಾಕ್ಯವನ್ನು ಸಂಪೂರ್ಣವಾಗಿ ಸಾರಲು ನಾನು ಸಭೆಗೆ ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ದೆವಾಚ್ಯಾ ಮನಾ ಸಾರ್ಕೆ ಅಮ್ಚ್ಯಾ ಫಾಯ್ದ್ಯಾಸಾಟ್ನಿ ಮಿಯಾ ತಾಂಡ್ಯಾಕ್ ಸೆವಕ್ ಹೊಲೊ, ಕಶ್ಯಾಕ್ ಮಟ್ಲ್ಯಾರ್, ದೆವಾನ್ ಅಪ್ಲಿ ಬರಿ ಖಬರ್ ಫುರಾ ಕಳ್ವುತಲೆ ಕಾಮ್ ಮಾಕಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:25
10 ತಿಳಿವುಗಳ ಹೋಲಿಕೆ  

ನಿಮಗೋಸ್ಕರ ನಿರ್ವಹಿಸುವದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕೆಲಸವನ್ನೂ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ದೈವಪ್ರಕಟನೆಯಿಂದ ನನಗೆ ತಿಳಿಸಲ್ಪಟ್ಟಿತೆಂಬದನ್ನೂ ನೀವು ಕೇಳಿದ್ದೀರಲ್ಲಾ.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೇ ಸೇವಕನಾಗಿರುವಿ.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಬಹುಮಾನ ದೊರೆಯುವದು; ಮತ್ತೊಬ್ಬನ ಇಷ್ಟದಿಂದ ಮಾಡಿದರೆ ಮನೆವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿದೆ.


ಹಾಗಾದರೆ ಅಪೊಲ್ಲೋಸನು ಏನು? ಪೌಲನು ಏನು? ಅವರು ಸೇವಕರು; ಅವರ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಉಚಿತಾರ್ಥವಾಗಿ ಅನುಗ್ರಹಿಸಿದ ಕೆಲಸವನ್ನನುಸರಿಸಿ ನಾನು ಈ ಸುವಾರ್ತೆಗೆ ಸೇವಕನಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು