Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:27 - ಕನ್ನಡ ಸತ್ಯವೇದವು J.V. (BSI)

27 ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಹಿಮೆನ್ ಭರುನ್ ಹೊತ್ತೆ ಹೆ ಖರೆ, ದುಸ್ರ್ಯಾ ಲೊಕಾಕ್ನಿ ಕಳ್ವುಕ್ ದೆವಾನ್ ನಿರ್ದಾರ್ ಕರ್‍ಲ್ಯಾನ್, ಹೆ ಮೊಟೆ ಖರೆ ಸಗ್ಳ್ಯಾ ಲೊಕಾಕ್ನಿ ಪರ್ಗಟ್ ಹೊಲೆ. ತುಮ್ಚ್ಯಾಕ್ಡೆ ಹೊತ್ತೊ ಕ್ರಿಸ್ತುಚ್ ತೆ ಖರೆ ಹೊವ್ನ್ ಹಾಯ್ ದೆವಾಚ್ಯಾ ಮಹಿಮೆತ್ ವಾಟೊ ಘೆವ್ಕ್ ತೊಚ್ ಅಮ್ಕಾ ಹೊತ್ತೊ ಎಕ್ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:27
39 ತಿಳಿವುಗಳ ಹೋಲಿಕೆ  

ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿದೆ.


ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.


ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ನನ್ನ ಪ್ರಿಯವಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವವೇದನೆ ಪಡುತ್ತೇನೆ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ನಮ್ಮ ರಕ್ಷಕನಾದ ದೇವರಿಂದಲೂ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನಿಂದಲೂ ನೇವಿುಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು. ನೀನು ನನ್ನ ಮೇಲೆ ಇಟ್ಟಂಥ ಪ್ರೀತಿಯು ಅವರಲ್ಲಿ ಇರಬೇಕೆಂದೂ ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ ಅಂದನು.


ಆತನಲ್ಲಿ ನೀವು ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವದಕ್ಕಾಗಿ ನಮ್ಮ ಸಂಗಡ ಕಟ್ಟಲ್ಪಡುತ್ತಾ ಇದ್ದೀರಿ.


ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ಇರುತ್ತಾನೆ; ನಾನು ಅವನಲ್ಲಿ ಇರುತ್ತೇನೆ.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ ಎಂದು ಹೇಳುವದಕ್ಕಾಗದು; ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಅಂತ ತಿಳುಕೊಳ್ಳಿರಿ ಎಂದು ಉತ್ತರಕೊಟ್ಟನು.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು