Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:29 - ಕನ್ನಡ ಸತ್ಯವೇದವು J.V. (BSI)

29 ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಕ್ರಿಸ್ತನು ನನಗೆ ನೀಡಿರುವ ಬಲದಿಂದ ಇದಕ್ಕೋಸ್ಕರವೇ ಕೆಲಸ ಮಾಡುತ್ತೇನೆ ಮತ್ತು ಹೋರಾಡುತ್ತೇನೆ. ಆ ಬಲವೇ ನನ್ನ ಜೀವನದಲ್ಲಿ ಕಾರ್ಯಮಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಹೆಚ್ಯಾಸಾಟಿಚ್ ಕ್ರಿಸ್ತಾನ್ ದಿಲ್ಲ್ಯಾ ಬಳಾನ್ ಕಾಮ್ ಕರ್‍ತಾ ಅನಿ ಹೊರಾಟ್ ಕರ್‍ತಾ, ತೊ ಬಳುಚ್ ಮಾಜ್ಯಾ ಜಿವನಾತ್ ಕಾಮ್ ಕರುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:29
28 ತಿಳಿವುಗಳ ಹೋಲಿಕೆ  

ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ.


ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಉಚಿತಾರ್ಥವಾಗಿ ಅನುಗ್ರಹಿಸಿದ ಕೆಲಸವನ್ನನುಸರಿಸಿ ನಾನು ಈ ಸುವಾರ್ತೆಗೆ ಸೇವಕನಾದೆನು.


ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ನಿಮಗೋಸ್ಕರವೂ ಲವೊದಿಕೀಯದವರಿಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರುವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ.


ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟಮಾಡಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನಮಾಡಿಕೊಂಡೆವು.


ಸಹೋದರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿರುವದಷ್ಟೆ.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಕೆಲಸ ಸಾಧಿಸಿದ್ದೂ ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಉತ್ಸಾಹವು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವದು.


ಈ ವರಗಳನ್ನೆಲ್ಲಾ ಆ ಒಬ್ಬ ಆತ್ಮನೇ ತನ್ನ ಚಿತ್ತಕ್ಕೆ ಬಂದ ಹಾಗೆ ಒಬ್ಬೊಬ್ಬನಿಗೆ ಹಂಚಿಕೊಟ್ಟು ನಡಿಸುತ್ತಾನೆ.


ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ನೆನಸಿ ಇತರರು ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ಸುವಾರ್ತೆಯನ್ನು ಪ್ರಕಟಿಸುವದಿಲ್ಲವೆಂಬದಾಗಿ ನಿಷ್ಕರ್ಷೆಮಾಡಿಕೊಂಡೆನು.


ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿವಿುತ್ತ ಬಾಧೆಯನ್ನು ಸೈರಿಸಿಕೊಂಡು ಬೇಸರಗೊಳ್ಳಲಿಲ್ಲ; ಇದನ್ನೆಲ್ಲಾ ಬಲ್ಲೆನು.


ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದಾಗಿ ಕೇಳುವಂಥ ಅದೇ ಹೋರಾಟವು ನಿಮಗುಂಟು.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ


ಕ್ರಿಸ್ತನು ನನ್ನಲ್ಲಿ ಮಾತಾಡುತ್ತಾನೆಂಬದಕ್ಕೆ ನಿಮಗೆ ಬೇಕಾದ ಪ್ರಮಾಣವು ಆಗ ತೋರಿಬರುವದು. ಆತನು ನಿಮ್ಮನ್ನು ಕುರಿತು ನಿರ್ಬಲನಾಗಿರದೆ ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.


ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.


ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರಿಸುತ್ತೇವೆ.


ಆದದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನಿಗೆ ಮೆಚ್ಚುವವರಾಗಿರಬೇಕೆಂಬದೇ ನಮ್ಮ ಗುರಿಯಾಗಿದೆ.


ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.


ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲೀಯವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿವಿುತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿವಿುತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವದಕ್ಕೆ ಹೆಣಗಾಡಿರಿ. ಬಹುಜನ ಒಳಕ್ಕೆ ಹೋಗುವದಕ್ಕೆ ನೋಡುವರು, ಆದರೆ ಅವರಿಂದಾಗುವದಿಲ್ಲ ಎಂದು ನಿಮಗೆ ಹೇಳುತ್ತೇನೆ.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ಪ್ರಾಣಾಪಾಯದ ತನಕ ಇನ್ನೂ ಅದನ್ನು ಎದುರಿಸಲಿಲ್ಲ.


ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟದ್ದರಿಂದಲೇ ಆ ಸುನ್ನತಿಯನ್ನು ಹೊಂದಿದಿರಿ. ಇದಲ್ಲದೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಸಾಮರ್ಥ್ಯದಲ್ಲಿ ನಂಬಿಕೆಯಿಡುವದರ ಮೂಲಕ ಅದರಲ್ಲಿ ಆತನ ಕೂಡ ಎದ್ದು ಬಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು