3-5 ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ದೇವಜನರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿ ಪರಲೋಕದಲ್ಲಿ ನಿಮಗೋಸ್ಕರ ಸಿದ್ಧವಾಗಿರುವ ಮಹಾಪದವಿಯನ್ನು ನೆನಸುತ್ತಾ ನಾವು ಪ್ರಾರ್ಥನೆಮಾಡುವಾಗೆಲ್ಲಾ ನಿಮ್ಮ ನಿವಿುತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಸ್ತೋತ್ರಮಾಡುತ್ತೇವೆ. ನೀವು ಆ ಪದವಿಯನ್ನು ಕುರಿತು ನಿಮ್ಮ ಬಳಿಗೆ ಬಂದಿರುವ ಸುವಾರ್ತೆಯ ಸತ್ಯವಾಕ್ಯದಿಂದ ಮೊದಲೇ ಕೇಳಿದಿರಿ.
3-4 ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.
ನಾವು ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಂಡು ನಮ್ಮ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡುವಾಗ ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ ಒಳ್ಳೇ ಮನಸ್ಸಾಕ್ಷಿಯುಳ್ಳವನಾಗಿ ಆರಾಧಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರ ಸಲ್ಲಿಸುತ್ತೇನೆ.
ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯನ್ನು ಕುರಿತೂ ಕೇಳಿ ನಾನು ನಿಮ್ಮ ನಿವಿುತ್ತವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರಮಾಡುತ್ತೇನೆ.
ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.