Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:7 - ಕನ್ನಡ ಸತ್ಯವೇದವು J.V. (BSI)

7 ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಆ ಸತ್ಯೋಪದೇಶವನ್ನು ಕಲಿತುಕೊಂಡಿರಿ. ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಶುಭಸಂದೇಶವನ್ನು ಕ್ರಿಸ್ತಯೇಸುವಿನ ನಂಬಿಕಸ್ಥ ದಾಸನೂ ನಮ್ಮ ಜೊತೆಯ ಸೇವಕನೂ ಆದ ಎಪಫ್ರನಿಂದ ಕಲಿತುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಎಪಫ್ರನಿಂದ ದೇವರ ಕೃಪೆಯ ಬಗ್ಗೆ ತಿಳಿದುಕೊಂಡಿರಿ. ಅವನು ನಮ್ಮ ಜೊತೆಯಲ್ಲಿಯೇ ಸೇವೆ ಮಾಡುತ್ತಿದ್ದಾನೆ. ನಾವು ಅವನನ್ನು ಪ್ರೀತಿಸುತ್ತೇವೆ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತ ಸೇವಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದನ್ನು ನೀವು ನಮ್ಮ ಪ್ರೀತಿಯ ಜೊತೆ ಸೇವಕನಾದ ಎಪಫ್ರನಿಂದ ಕಲಿತುಕೊಂಡಿರಿ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹೆ ತುಮಿ ತುಮ್ಚ್ಯಾ ಪ್ರೆಮಾಚೊ ವಾಂಗ್ಡಿ ಸೆವಕ್ ಅನಿ ಭಾವ್ ಎಪಾಪ್ರಾಸಾಕ್ನಾ ಶಿಕ್ಲ್ಯಾಸಿ, ತೊ ತುಮ್ಚ್ಯಾ ಸಾಟ್ನಿ ಕ್ರಿಸ್ತಾಚ್ಯಾ ವಿಶ್ವಾಸಿ ಸೆವಕ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:7
19 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ಕ್ರಿಸ್ತ ಯೇಸುವಿನ ನಿವಿುತ್ತವಾಗಿ ನನ್ನ ಜೊತೆಸೆರೆಯವನಾದ ಎಪಫ್ರನೂ ನನ್ನ ಸಹಕಾರಿಗಳಾದ


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸಂಗತಿಗಳನ್ನೆಲ್ಲಾ ನಿಮಗೆ ತಿಳಿಸುವನು.


ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸುವೂ ತನ್ನನ್ನು ನೇವಿುಸಿದಾತನಿಗೆ ನಂಬಿಗಸ್ತನಾಗಿದ್ದಾನೆ.


ನೀನು ನನ್ನಿಂದ ಅನೇಕ ಸಾಕ್ಷಿಗಳ ಮುಂದೆ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ ಜೊತೆಕೆಲಸದವನೂ ಸಹಭಟನೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನೆನಸಿದ್ದೇನೆ.


ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.


ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಲ್ಲವೇ.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೇ ಸೇವಕನಾಗಿರುವಿ.


ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.


ಕನ್ನಿಕೆಯರನ್ನು ಕುರಿತು ಕರ್ತನಿಂದ ಬಂದ ಆಜ್ಞೆ ನನಗೆ ಯಾವದೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.


ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು.


ಅವನ ಧಣಿಯು - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಅಂದನು.


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?


ನನ್ನ ಸೇವಕನಾದ ಮೋಶೆ ಅಂಥವನಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನು.


ಆಗ ಅವನ ಜೊತೇಸೇವಕನು ಅವನ ಕಾಲಿಗೆ ಬಿದ್ದು - ಸ್ವಲ್ಪ ತಾಳಿಕೋ, ತೀರಿಸುತ್ತೇನೆ ಎಂದು ಬೇಡಿಕೊಂಡನು.


ಅವನನ್ನು ನಂಬಿಗಸ್ತನಾದ ಪ್ರಿಯ ಸಹೋದರನಾಗಿರುವ ನಿಮ್ಮ ಊರಿನ ಒನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುವ ಸಂಗತಿಗಳನ್ನೆಲ್ಲಾ ನಿಮಗೆ ತಿಳಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು