Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:2 - ಕನ್ನಡ ಸತ್ಯವೇದವು J.V. (BSI)

2-3 ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶೆ ಮಟ್ಲ್ಯಾರ್, ತೆನಿ ಸಗ್ಳೆ ಭುತ್ತುರ್‍ಲ್ಯಾ ಮನಾತ್ ಉಮ್ಮೆದಿನ್ ಭುರುನ್ ಪ್ರೆಮಾನ್ ಎಕ್ ಹೊವ್ಚೆ ಅನಿ ಖರ್ಯಾ ಸಮ್ಜನಿಕ್ನಾ ಯೆತಲ್ಯಾ ಘಟ್ಟ್ ವಿಶ್ವಾಸಾತ್ ಸಾವ್ಕಾರ್ ಹೊವ್ಚೆ ಮನುನ್ ಆಶಾ ಕರ್‍ತಾ, ಮಟ್ಲ್ಯಾರ್, ದೆವಾಚೆ ಮೊಟೆ ಖರೆ ತೆನಿ ಫುರಾ ಕಳ್ವುನ್ ಘೆವ್ಚೆ; ಕ್ರಿಸ್ತುಚ್ ತೆ ಖರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:2
58 ತಿಳಿವುಗಳ ಹೋಲಿಕೆ  

ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ನೀವು ನನ್ನ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ


ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.


ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ. ಅದು ಸಮಸ್ತವನ್ನು ಸಂಪೂರ್ಣಮಾಡುವ ಬಂಧವಾಗಿದೆ.


ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ


ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ನಾನೂ ತಂದೆಯೂ ಒಂದಾಗಿದ್ದೇವೆ ಅಂದನು.


ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ.


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ದಯಪಾಲಿಸಿರುವ ಕೃಪಾವರಗಳನ್ನು ತಿಳುಕೊಳ್ಳುವದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದೆವು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ತಂದೆಗೆ ಇರುವದೆಲ್ಲಾ ನನ್ನದು; ಆದದರಿಂದಲೇ ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುವನೆಂದು ಹೇಳಿದೆನು.


ಮಾಡಿದರೆ ನನ್ನ ಮಾತನ್ನು ನಂಬದೆ ಇದ್ದರೂ ಆ ಕ್ರಿಯೆಗಳ ಸಾಕ್ಷಿಯನ್ನಾದರೂ ನಂಬಿರಿ; ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ ತಂದೆಯಲ್ಲಿ ನಾನು ಇದ್ದೇನೆಂತಲೂ ನೀವು ತಿಳುಕೊಂಡು ಮನನಮಾಡಿಕೊಳ್ಳುವಿರಿ ಅಂದನು.


ಎಲ್ಲರು ತನಗೆ ಮಾನ ಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತಂದೆಯು ಇಚ್ಫೈಸುತ್ತಾನೆ. ಮಗನಿಗೆ ಮಾನಕೊಡದವನು ಅವನನ್ನು ಕಳುಹಿಸಿದ ತಂದೆಗೂ ಮಾನಕೊಡದವನಾಗಿದ್ದಾನೆ.


ಅದಕ್ಕೆ ಯೇಸು - ನನ್ನ ತಂದೆಯು ಇಂದಿನವರೆಗೂ ಕೆಲಸಮಾಡುತ್ತಾನೆ, ನಾನೂ ಕೆಲಸಮಾಡುತ್ತೇನೆ ಅಂದನು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.


ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ;


ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು.


ಆಹಾ, ಸಹೋದರರು ಒಂದಾಗಿರುವದು ಎಷ್ಟೋ ಒಳ್ಳೇದು, ಎಷ್ಟೋ ರಮ್ಯವಾದದ್ದು!


ಇದಲ್ಲದೆ ಆತ್ಮನು ಸಾಕ್ಷಿ ಕೊಡುವವನಾಗಿದ್ದಾನೆ; ಆತ್ಮನು ಸತ್ಯಸ್ವರೂಪನೇ.


ನಾವು ಸತ್ಯಕ್ಕೆ ಸೇರಿದವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.


ನಂಬಿದ್ದ ಮಂಡಲಿಯವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಇದಲ್ಲದೆ ಒಬ್ಬನಾದರೂ ತನಗಿದ್ದ ಆಸ್ತಿಯಲ್ಲಿ ಯಾವದೊಂದನ್ನೂ ಸ್ವಂತವಾದದ್ದೆಂದು ಹೇಳಲಿಲ್ಲ. ಎಲ್ಲವೂ ಅವರಿಗೆ ಹುದುವಾಗಿ ಇತ್ತು.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಶ್ರೀಮತ್ ಥೆಯೊಫಿಲನೇ, ನಮ್ಮಲ್ಲಿ ನಿಶ್ಚಯಕ್ಕೆ ಬಂದಿರುವ ಕಾರ್ಯಗಳನ್ನು ಮೊದಲಿಂದ ಕಣ್ಣಾರೆ ಕಂಡು ಸುವಾರ್ತಾ ವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಕಾರ್ಯಗಳನ್ನು ಚರಿತ್ರ ರೂಪವಾಗಿ ಬರೆಯುವದಕ್ಕೆ ಅನೇಕರು ಪ್ರಯತ್ನಿಸಿರಲಾಗಿ


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ನೀವೆಲ್ಲರು ಒಬ್ಬೊಬ್ಬರಾಗಿ ಪ್ರವಾದಿಸುವದಕ್ಕೆ ಅಡ್ಡಿಯಿಲ್ಲ; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಎಚ್ಚರಿಕೆ ಹೊಂದುವರು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು; ಈಗಿನ ಕಾಲದಲ್ಲಿ ದೇವಜನರಿಗೆ ತಿಳಿಸಲ್ಪಟ್ಟಿದೆ.


ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.


ಇದಲ್ಲದೆ ನಮಗೋಸ್ಕರವೂ ಪ್ರಾರ್ಥನೆ ಮಾಡಿರಿ. ಕ್ರಿಸ್ತನ ವಿಷಯದಲ್ಲಿ ದೇವರು ತಿಳಿಯಪಡಿಸಿದ ಸತ್ಯಾರ್ಥವನ್ನು ಪ್ರಸಂಗಿಸುವದಕ್ಕೆ ಆತನು ಅನುಕೂಲವಾದ ಸಂದರ್ಭವನ್ನು ನಮಗೆ ದಯಪಾಲಿಸಿ ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ತಿಳಿಸುವಂತೆ ಅನುಗ್ರಹಮಾಡಬೇಕೆಂದು ಬೇಡಿಕೊಳ್ಳಿರಿ; ಆ ಸತ್ಯಾರ್ಥದ ನಿವಿುತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು