Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:20 - ಕನ್ನಡ ಸತ್ಯವೇದವು J.V. (BSI)

20 ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯ ಕಲ್ಪಿತ ಆಜ್ಞೆಗಳನ್ನೂ ಉಪದೇಶಗಳನ್ನೂ ಅನುಸರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ಕ್ರಿಸ್ತಯೇಸುವಿನೊಡನೆ ಮೃತರಾಗಿರುವ ಕಾರಣ, ಪ್ರಾಕೃತ ಶಕ್ತಿಗಳ ಬಂಧನದಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿರುವಲ್ಲಿ, ಪ್ರಾಪಂಚಿಕ ವಿಧಿನಿಯಮಗಳಿಗೆ ಒಳಪಟ್ಟು ಬಾಳುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಕ್ರಿಸ್ತನೊಂದಿಗೆ ಸತ್ತು ಪ್ರಾಪಂಚಿಕವಾದ ನಿರರ್ಥಕ ನಿಯಮಗಳಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿದ್ದರೂ ನೀವು ಈ ಲೋಕಕ್ಕೆ ಸೇರಿದವರಂತೆ ವರ್ತಿಸುವುದೇಕೆ? ಈ ನಿಯಮಗಳನ್ನು ಏಕೆ ಅನುಸರಿಸುತ್ತಿರುವಿರಿ ಎಂಬುದೇ ನನ್ನ ಮಾತಿನ ಅರ್ಥ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪ್ರಾಪಂಚಿಕ ಬಾಲಬೋಧನೆಗಳಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದೀರಿ. ಹಾಗಾದರೆ ನೀವು ಇನ್ನೂ ಪ್ರಾಪಂಚಿಕ ನಿಯಮಗಳಿಗೆ ಅಧೀನರಾಗಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತುಮಿ ಕ್ರಿಸ್ತಾಚ್ಯಾ ವಾಂಗ್ಡಾ ಮರುನ್, ಹ್ಯಾ ಜಗಾಚ್ಯಾ ಫಾಯ್ದ್ಯಾಕ್ ಪಡಿನಸಲ್ಲ್ಯಾ ನೆಮಾತ್ನಾ ಸುಟ್ಕಾ ಹೊಲ್ಯಾಸಿ. ಅಶೆ ರ್‍ಹಾಲ್ಯಾರ್‍ಬಿ, ತುಮಿ ಹ್ಯಾ ಜಗಾಕ್ ಸಮಂದ್ ಪಡಲ್ಯಾಂಚ್ಯಾ ಸಾರ್ಕೆ ಚಲ್ತ್ಯಾಸಿ? ಕಶ್ಯಾಕ್ ತುಮಿ ಹ್ಯಾ ನೆಮಾಚ್ಯಾ ಸಾರ್ಕೆ ಚಲ್ತ್ಯಾಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:20
19 ತಿಳಿವುಗಳ ಹೋಲಿಕೆ  

ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನಬೋಧೆಯಿಂದ ನಿಮ್ಮ ಮನಸ್ಸನ್ನು ಕೆಡಿಸಿ ನಿಮ್ಮನ್ನು ವಶಮಾಡಿಕೊಂಡಾರು, ಎಚ್ಚರಿಕೆಯಾಗಿರ್ರಿ.


ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು.


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದವರ ಬಾಲಬೋಧೆಗೆ ಅಧೀನರಾಗಿದ್ದೆವು.


ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.


ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.


ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.


ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ.


ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ;


ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.


ಇದನ್ನು ಹಿಡಿಯಬೇಡ, ಇದನ್ನು ರುಚಿನೋಡಬೇಡ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು