ಕೊಲೊಸ್ಸೆಯವರಿಗೆ 2:6 - ಕನ್ನಡ ಸತ್ಯವೇದವು J.V. (BSI)6 ಆದದರಿಂದ ನೀವು ಕರ್ತನಾದ ಯೇಸುವೆಂಬ ಕ್ರಿಸ್ತನನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಕ್ರಿಸ್ತಯೇಸುವನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ ಐಕ್ಯತೆಯಿಂದ ಬಾಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ನೀವು ಕ್ರಿಸ್ತ ಯೇಸುವನ್ನು ಕರ್ತ ಎಂದು ಅಂಗೀಕರಿಸಿದಂತೆಯೇ ಅವರಲ್ಲಿ ಬಾಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಧನಿ ಕ್ರಿಸ್ತ್ ಜೆಜುಕ್ ತುಮಿ ಜೆಜು ಕ್ರಿಸ್ತಾಕ್ ಧನಿ ಮನುನ್ ಘೆಟಲ್ಲ್ಯಾಸಾಟ್ನಿ ತೆಚ್ಯಾಕ್ಡೆ ಎಕ್ ಹೊವ್ನ ರ್‍ಹಾವಾ. ಅಧ್ಯಾಯವನ್ನು ನೋಡಿ |
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.