Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:10 - ಕನ್ನಡ ಸತ್ಯವೇದವು J.V. (BSI)

10 ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನಿಗೆ ದಾಯಾದನಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನನ್ನು ಕುರಿತು ಅಪ್ಪಣೆಗಳನ್ನು ಹೊಂದಿದಿರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅರಿಸ್ತಾರ್ಕನು ವಂದನೆ ತಿಳಿಸಿದ್ದಾನೆ. ಅವನೂ ನನ್ನೊಡನೆ ಸೆರೆಯಲ್ಲಿದ್ದಾನೆ. ಬಾರ್ನಬನಿಗೆ ಸೋದರ ಬಾಂಧ್ಯವ್ಯವುಳ್ಳ ಮಾರ್ಕನೂ ವಂದನೆಯನ್ನು ಹೇಳುತ್ತಾನೆ. (ಮಾರ್ಕನ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ಈಗಾಗಲೇ ಹೇಳಿದ್ದೇನೆ. ಅವನು ಬಂದರೆ ಅವನನ್ನು ಸ್ವಾಗತಿಸಿರಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಜೊತೆ ಸೆರೆಯಾಳಾದ ಅರಿಸ್ತಾರ್ಕ, ಬಾರ್ನಬನ ಸಹೋದರಿಯ ಮಗನಾದ ಮಾರ್ಕನು ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನ ವಿಷಯದಲ್ಲಿ ನೀವು ಮಾರ್ಗದರ್ಶನ ಹೊಂದಿದ್ದೀರಲ್ಲಾ, ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅರಿಸ್ತಾರ್ಕ್ ಮನ್ತಲ್ಯಾನ್ಬಿ ನಮಸ್ಕಾರ್ ಕಳ್ವುಲಾ, ತೊಬಿ ಮಾಜ್ಯಾ ವಾಂಗ್ಡಾ ಬಂಧಿಖಾನ್ಯಾತ್ ಹಾಯ್, ಬಾರ್ನಾಬಾಸಾಚ್ಯಾ ವಾಂಗ್ಡಾ ಸಂಮದಿಕ್ ಹೊವ್ನ್ ಹೊತ್ತ್ಯಾ ಮಾರ್ಕಾನ್ಬಿ ತುಮ್ಕಾ ನಮಸ್ಕಾರ್ ಸಾಂಗ್ಲಾ, ಮಾರ್ಕಾಚ್ಯಾ ವಿಶಯಾತ್ ತುಮಿ ಕಾಯ್ ಕರುಚೆ ಮನುನ್ ಮಿಯಾ ಅತ್ತಾ ಅತ್ತಾ ಸಾಂಗ್ಲಾ. ತೊ ಯೆಲ್ಯಾರ್ ತೆಕಾ ಸ್ವಾಗತ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:10
17 ತಿಳಿವುಗಳ ಹೋಲಿಕೆ  

ಮಾರ್ಕ ಅರಿಸ್ತಾರ್ಕ ದೇಮ ಲೂಕರೂ ನಿನ್ನನ್ನು ವಂದಿಸುತ್ತಾರೆ.


ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ನನಗೆ ಸೇವೆಗಾಗಿ ಉಪಯುಕ್ತನಾಗಿದ್ದಾನೆ.


ಆಗ ಊರೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕಶಾಲೆಯೊಳಗೆ ನುಗ್ಗಿದರು.


ಆಗ ಅದ್ರವಿುತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.


ಪುರ್ರನ ಮಗನಾದ ಬೆರೋಯಪಟ್ಟಣದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಪಟ್ಟಣದ ಗಾಯನೂ ತಿಮೊಥೆಯನೂ ಆಸ್ಯಸೀಮೆಯವರಲ್ಲಿ ತುಖಿಕನೂ ತ್ರೊಫಿಮನೂ ಆಸ್ಯಸೀಮೆಯವರೆಗೆ ಅವನ ಜೊತೆಯಲ್ಲಿ ಹೋದರು.


ತರುವಾಯ ಅವನು ಯೋಚನೆಮಾಡಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.


ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ.


ನನ್ನ ಸ್ವಜನರೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರೆ, ಮತ್ತು ನನಗಿಂತ ಮುಂಚೆ ಕ್ರಿಸ್ತನನ್ನು ನಂಬುವವರಾದರು.


ನೀವು ಆಕೆಯನ್ನು ಕರ್ತನ ಶಿಷ್ಯಳೆಂದು ದೇವಜನರಿಗೆ ತಕ್ಕ ಹಾಗೆ ಸೇರಿಸಿಕೊಂಡು ಸಹಾಯವು ಯಾವ ವಿಷಯದಲ್ಲಿ ಬೇಕಾಗಿದ್ದರೂ ಸಹಾಯವನ್ನು ಮಾಡಿರಿ. ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳು.


ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣ ಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇವಿುಗೆ ಹೋದನು.


ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು.


ಸಲಮೀಸಿಗೆ ಸೇರಿದಾಗ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸಿದರು. ಯೋಹಾನನು ಪರಿಚಾರಕನಾಗಿ ಅವರ ಸಂಗಡ ಇದ್ದನು.


ಬಾರ್ನಬ ಸೌಲರು ಮಾಡಬೇಕಾದ ಧರ್ಮಕಾರ್ಯವನ್ನು ತೀರಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರಕೊಂಡು ಯೆರೂಸಲೇವಿುನಿಂದ ಹಿಂತಿರಿಗಿ ಬಂದರು.


ಕ್ರಿಸ್ತ ಯೇಸುವಿನ ನಿವಿುತ್ತವಾಗಿ ನನ್ನ ಜೊತೆಸೆರೆಯವನಾದ ಎಪಫ್ರನೂ ನನ್ನ ಸಹಕಾರಿಗಳಾದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು