Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:16 - ಕನ್ನಡ ಸತ್ಯವೇದವು J.V. (BSI)

16 ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಮತ್ತು ನಾನು ಬರೆದ ಪತ್ರಿಕೆಯನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಪತ್ರವನ್ನು ನೀವು ಓದಿದ ಬಳಿಕ ಲವೊದಿಕೀಯದ ಸಭೆಯವರಿಗೆ ಓದಿ ಹೇಳುವ ವ್ಯವಸ್ಥೆಮಾಡಿರಿ. ಅಂತೆಯೇ, ಲವೊದಿಕೀಯದಿಂದ ಕಳಿಸಲಾಗುವ ಪತ್ರವನ್ನು ತರಿಸಿಕೊಂಡು ಓದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ಪತ್ರವನ್ನು ಓದಿದ ನಂತರ ಲವೊದಿಕೀಯದ ಸಭೆಯವರಿಗೂ ಓದಲು ಕೊಡಿರಿ. ನಾನು ಲವೊದಿಕೀಯದವರಿಗೆ ಬರೆದಿರುವ ಪತ್ರವನ್ನು ನೀವೂ ಓದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಪತ್ರವನ್ನು ನಿಮ್ಮ ಮಧ್ಯದಲ್ಲಿ ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿ ಹೇಳುವ ವ್ಯವಸ್ಥೆಮಾಡಿರಿ. ಹಾಗೆಯೇ ಲವೊದಿಕೀಯದಿಂದ ಬರುವ ಪತ್ರವನ್ನು ನೀವೂ ಓದಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹಿ ಚಿಟ್ ವಾಚುನ್ ಹೊಲ್ಲ್ಯಾ ಮಾನಾ, ಲವೊದಿಸಿಯಾಚ್ಯಾ ತಾಂಡ್ಯಾಚ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ವಾಚುಕ್ ದಿವಾ, ಅನಿ ಲವೊದಿಸಿಯಾತ್ಲ್ಯಾನಿ ಧಾಡಲ್ಲಿ ಚಿಟ್ ತುಮಿಬಿ ವಾಚಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:16
6 ತಿಳಿವುಗಳ ಹೋಲಿಕೆ  

ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನ ಆಣೆ ಇಡುತ್ತೇನೆ.


ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತು ಇಟ್ಟುಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.


ನಿಮಗೋಸ್ಕರವೂ ಲವೊದಿಕೀಯದವರಿಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರುವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ.


ಇವನು ನಿಮಗೋಸ್ಕರವೂ ಲವೊದಿಕೀಯದವರಿಗೋಸ್ಕರವೂ ಹಿರಿಯಾಪೊಲಿಯವರಿಗೋಸ್ಕರವೂ ಬಹಳ ಪ್ರಯಾಸ ಪಡುತ್ತಾನೆಂದು ಸಾಕ್ಷಿ ಹೇಳುತ್ತೇನೆ.


ಲವೊದಿಕೀಯದಲ್ಲಿರುವ ಸಹೋದರರಿಗೂ ನುಂಫಳಿಗೂ ಆಕೆಯ ಮನೆಯಲ್ಲಿ ಕೂಡುವ ಸಭೆಯವರಿಗೂ ವಂದನೆ ಹೇಳಿರಿ.


ಸೆರಾಯನಿಗೆ ಹೀಗೆ ಹೇಳಿದನು - ನೋಡು, ನೀನು ಬಾಬೆಲಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ [ತಕ್ಕವರಿಗೆ] ಓದಿ ಹೇಳಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು