Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:3 - ಕನ್ನಡ ಸತ್ಯವೇದವು J.V. (BSI)

3-4 ಇದಲ್ಲದೆ ನಮಗೋಸ್ಕರವೂ ಪ್ರಾರ್ಥನೆ ಮಾಡಿರಿ. ಕ್ರಿಸ್ತನ ವಿಷಯದಲ್ಲಿ ದೇವರು ತಿಳಿಯಪಡಿಸಿದ ಸತ್ಯಾರ್ಥವನ್ನು ಪ್ರಸಂಗಿಸುವದಕ್ಕೆ ಆತನು ಅನುಕೂಲವಾದ ಸಂದರ್ಭವನ್ನು ನಮಗೆ ದಯಪಾಲಿಸಿ ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ತಿಳಿಸುವಂತೆ ಅನುಗ್ರಹಮಾಡಬೇಕೆಂದು ಬೇಡಿಕೊಳ್ಳಿರಿ; ಆ ಸತ್ಯಾರ್ಥದ ನಿವಿುತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3-4 ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮಿ ಅಮ್ಚ್ಯಾಸಾಟ್ನಿಬಿ ಮಾಗ್ನಿ ಕರಾ. ಲೊಕಾಕ್ನಿ ಸಗ್ಳಿ ದೆವಾಚಿ ಬರಿ ಖಬರ್ ಸಾಂಗುಕ್; ಬರೊ ಅವಕಾಸ್ ತೊ ತುಮ್ಕಾ ದಿ ಸಾರ್ಕೆ ಮಾಗ್ನಿ ಕರಾ, ದೆವಾನ್ ಕ್ರಿಸ್ತಾಚ್ಯಾ ವಿಶಯಾತ್ ಅಮ್ಕಾ ಕಳ್ವಲ್ಲೆ ಘುಟ್ಟ್ ಅಮಿ ಶಿಕ್ವುಕ್ ಹೊಯ್ ಸಾರ್ಕೆ ಮಾಗ್ನಿ ಕರಾ. ಮಿಯಾ ಹೆ ಖರೆ ಪರ್ಗಟ್ ಕರಲ್ಲ್ಯಾಸಾಟ್ನಿಚ್ ಅತ್ತಾ ಬಂಧಿಖಾನ್ಯಾತ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:3
27 ತಿಳಿವುಗಳ ಹೋಲಿಕೆ  

ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.


ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು; ಈಗಿನ ಕಾಲದಲ್ಲಿ ದೇವಜನರಿಗೆ ತಿಳಿಸಲ್ಪಟ್ಟಿದೆ.


ಕ್ರಿಸ್ತನ ಸುವಾರ್ತೆಯನ್ನು ಸಾರುವದಕ್ಕಾಗಿ ನಾನು ತ್ರೋವಕ್ಕೆ ಬರಲು ಕರ್ತನ ಕೃಪೆಯಿಂದ ನನಗೆ ಒಳ್ಳೇ ಸಂದರ್ಭ ಉಂಟಾಯಿತು.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಯಾಕಂದರೆ ಕಾರ್ಯಕ್ಕೆ ಅನುಕೂಲವಾದ ಮಹಾಸಂದರ್ಭವು ನನಗುಂಟು ಮತ್ತು ವಿರೋಧಿಗಳು ಬಹಳ ಮಂದಿ ಇದ್ದಾರೆ.


ಜನರು ನಮ್ಮನ್ನು ಕ್ರಿಸ್ತನ ಕೈಕೆಳಗಿನವರೆಂತಲೂ ದೇವರು ತಿಳಿಸಿರುವ ಸತ್ಯಾರ್ಥಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಬೇಕು.


ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಇದಲ್ಲದೆ ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹಿಸುವನೆಂದು ನನಗೆ ನಿರೀಕ್ಷೆ ಉಂಟು. ಆದಕಾರಣ ನನಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.


ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು.


ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಅವನು ಅನೇಕಾವರ್ತಿ ನನ್ನನ್ನು ಆದರಿಸಿದನು;


ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ


ಅದನ್ನು ಕುರಿತು ನಾನು ಹಿಂದೆ ಸಂಕ್ಷೇಪವಾಗಿ ಬರೆದಿದ್ದೇನೆ; ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳಬಹುದು.


ಇದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು