Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:5 - ಕನ್ನಡ ಸತ್ಯವೇದವು J.V. (BSI)

5 ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ವಿಶ್ವಾಸ್ ನಸಲ್ಲ್ಯಾ ಲೊಕಾಂಚ್ಯಾಕ್ನಾ ಯಾವಾರ್ ಕರ್‍ತಾನಾ, ಬುದ್ದ್ ಹೊತ್ತೆ ಹೊವ್ನ್ ರ್‍ಹಾವಾ, ತುಮ್ಕಾ ದಿಲ್ಲೊ ಎಳ್ ಬರ್‍ಯಾ ರಿತಿನ್ ವಾಪ್ರುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:5
15 ತಿಳಿವುಗಳ ಹೋಲಿಕೆ  

ಹೀಗಿದ್ದರೆ ನೀವು ಹೊರಗಿನವರ ಎದುರಿನಲ್ಲಿ ಸಜ್ಜನರಾಗಿ ನಡೆದುಕೊಳ್ಳುವಿರಿ ಮತ್ತು ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.


ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.


ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದರಿಂದ ಇದನ್ನು ಬರೆದಿದ್ದೇನೆ; ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.


ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನಿಸಿಕೊಂಡಿರಬೇಕು; ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ಉರ್ಲಿನೊಳಗೆ ಸಿಕ್ಕಿಬಿದ್ದಾನು.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ಆತನು ಅವರಿಗೆ - ದೇವರ ರಾಜ್ಯದ ಗುಟ್ಟು ನಿಮಗೇ ಕೊಟ್ಟಿದೆ; ಹೊರಗಿನವರಿಗೆ ಎಲ್ಲವೂ ಸಾಮ್ಯದ ಮರೆಯಲ್ಲಿವೆ.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡಕೊಳ್ಳುವೆವು.


ಅದಕ್ಕೆ ರಾಜನು - ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ [ಮರಣದಂಡನೆಯ] ನಿಯಮವೇ ನಿಮಗೆ ಗತಿಯಾಗುವದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡಿತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು