Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:22 - ಕನ್ನಡ ಸತ್ಯವೇದವು J.V. (BSI)

22 ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಗುರುತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಜುದೇಯ ಪ್ರಾಂತ್ಯದಲ್ಲಿದ್ದ ಕ್ರೈಸ್ತ ಸಭೆಗಳಿಗೆ ನನ್ನ ಪರಿಚಯವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕ್ರಿಸ್ತನಲ್ಲಿರುವ ಜುದೇಯದ ಸಭೆಗಳವರು ನನ್ನನ್ನು ಹಿಂದೆಂದೂ ಭೇಟಿಯಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತ್ಯಾ ಎಳಾರ್ ಕ್ರಿಸ್ತಾಚ್ಯಾ ವೈನಾ ಜುದೆಯಾಚ್ಯಾ ಪ್ರಾಂತ್ರ್ಯಾತ್ಲ್ಯಾ ಲೊಕಾಕ್ನಿ ಮಾಜಿ ವಳಕ್ ನತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:22
11 ತಿಳಿವುಗಳ ಹೋಲಿಕೆ  

ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.


ನನ್ನ ಸ್ವಜನರೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರೆ, ಮತ್ತು ನನಗಿಂತ ಮುಂಚೆ ಕ್ರಿಸ್ತನನ್ನು ನಂಬುವವರಾದರು.


ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ -


ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ಹೇಳಿರಿ.


ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.


ಕ್ರಿಸ್ತನ ಸೇವೆಯಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.


ಆದರೂ ಕರ್ತನು ಪ್ರತಿಯೊಬ್ಬನಿಗೆ ಯಾವ ಯಾವ ಸ್ಥಿತಿಯನ್ನು ನೇವಿುಸಿದ್ದಾನೋ, ಅಂದರೆ ದೇವರು ಕರೆಯುವಾಗ ಪ್ರತಿಯೊಬ್ಬನು ಯಾವ ಯಾವ ಸ್ಥಿತಿಯಲ್ಲಿ ಇದ್ದಾನೋ ಆಯಾ ಸ್ಥಿತಿಗೆ ಸರಿಯಾಗಿ ನಡೆದುಕೊಳ್ಳಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಆಜ್ಞಾಪಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು