ಗಲಾತ್ಯದವರಿಗೆ 2:20 - ಕನ್ನಡ ಸತ್ಯವೇದವು J.V. (BSI)20 ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಮಿಯಾ ಅತ್ತಾ ಜಿವನ್ ಕರುಕ್ ಲಾಗ್ಲಾ ತೊ ಮಿಯಾ ನ್ಹಯ್, ಕ್ರಿಸ್ತುಚ್ ಮಾಜ್ಯಾ ಭುತ್ತುರ್ ಜಿವನ್ ಕರುಕ್ ಲಾಗ್ಲಾ, ಶಾರಿರಿಕ್ ರಿತಿಚೆ ಜಿವನ್ ಮಿಯಾ ಕರುಕ್ ಲಾಗ್ಲಾ ತೆ ಮಿಯಾ ದೆವಾಚ್ಯಾ ಲೆಕಾಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾ ವೈನಾ ಜಿವನ್ ಕರುಕ್ ಲಾಗ್ಲಾ. ತೆನಿ ಮಾಜೊ ಪ್ರೆಮ್ ಕರ್‍ಲ್ಯಾನ್ ಅನಿ ಮಾಜ್ಯಾ ಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.