Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:6 - ಕನ್ನಡ ಸತ್ಯವೇದವು J.V. (BSI)

6 ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರು ಮುಖದಾಕ್ಷಿಣ್ಯ ಮಾಡುವವನಲ್ಲ. ಮಾನಿಷ್ಠರೆನಿಸಿಕೊಂಡವರು ನನ್ನ ಮಾತಿಗೆ ಒಪ್ಪಿದರೇ ಹೊರತು ನನಗೇನೂ ಕಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಬೋಧಿಸುವ ಸುವಾರ್ತೆಗೆ ಅವರೇನೂ ಸೇರಿಸಲಿಲ್ಲ. (ಅವರು ಪ್ರಮುಖರಾಗಿದ್ದರೊ ಪ್ರಮುಖರಾಗಿರಲಿಲ್ಲವೊ ಅದು ನನಗೆ ಮುಖ್ಯವಲ್ಲ. ದೇವರಿಗೆ ಎಲ್ಲಾ ಜನರು ಒಂದೇ ಆಗಿದ್ದಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಕೊನ್ ಲೈ ಮೊಟೆ ಮನುನ್ ಘೆಟಲ್ಲೆ ತೆ, ಅದ್ದಿ ಮೊಟೆ ಅಸ್ತಿಲ್, ತೆ ಮಾಕಾ ಸಮಂದ್ ಪಡಲ್ಲೆ ನಾ, ಕಶ್ಯಾಕ್ ಮಟ್ಲ್ಯಾರ್, ದೆವ್ ತೊಂಡ್ ಬಗುನ್ ನ್ಯಾಯ್ ನಿರ್ನಯ್ ಕರಿನಾ, ಮಾಜ್ಯಾ ಶಿಕಾಪಾಚ್ಯಾ ವಿಶಯಾತ್ ತೆನಿ ಅನಿ ಕಾಯ್ಬಿ ಜಾಸ್ತಿಚೆ ಮಾಕಾ ಸಾಂಗುಕ್ ದಿವ್ಕನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:6
22 ತಿಳಿವುಗಳ ಹೋಲಿಕೆ  

ದೈವಪ್ರೇರಣೆಗನುಸಾರವಾಗಿ ಹೋದೆನು. ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬದನ್ನು ಅಲ್ಲಿದ್ದವರಿಗೆ ತಿಳಿಸಿದೆನು. ಆದರೆ ನಾನು ಪಡುತ್ತಿರುವ ಪ್ರಯಾಸವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.


ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ -


ನಾನು ಹೀಗೆ ಬರೆದು ಬುದ್ಧಿಹೀನನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಕೇವಲ ಅಲ್ಪನಾದರೂ ಅತಿ ಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಆ ಜನರಿಗಿಂತ ಒಂದರಲ್ಲಿಯಾದರೂ ಕಡಿಮೆಯಾಗಲಿಲ್ಲ.


ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿದವನಾಗಿದ್ದಾನೆ.


ಅತಿಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ.


ದೇವರಿಗೆ ಪಕ್ಷಪಾತವಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಆದರೆ ಧರ್ಮಶಾಸ್ತ್ರವುಳ್ಳವರಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.


ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಅವರು ಯಾವ ರೀತಿಯಿಂದ ನಡೆದುಕೊಂಡು ಪ್ರಾಣಬಿಟ್ಟರೆಂಬದನ್ನು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ಇವರು - ಬೋಧಕನೇ, ನೀನು ಸರಿಯಾಗಿ ಮಾತಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.


ಇವರು ಬಂದು - ಬೋಧಕನೇ, ನೀನು ಸತ್ಯವಂತನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ,


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ.


ಇದಕ್ಕಿಂತ ಮುಂಚೆ ಥೈದನು ಎದ್ದು ತಾನು ದೊಡ್ಡ ಮನುಷ್ಯನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು. ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು