Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:8 - ಕನ್ನಡ ಸತ್ಯವೇದವು J.V. (BSI)

8 ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ ಹಾಗೆಯೇ ಸುನ್ನತಿಯಿಲ್ಲದವರಿಗೆ ಅದನ್ನು ಸಾರುವ ಕೆಲಸವು ನನಗೆ ಕೊಟ್ಟಿರುವದನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೌದು, ಯೆಹೂದ್ಯರಿಗೆ ಪ್ರೇಷಿತನಾಗುವಂತೆ ಪೇತ್ರನನ್ನು ಪ್ರೇರೇಪಿಸಿದ ದೇವರು, ಯೆಹೂದ್ಯರಲ್ಲದವರಿಗೆ ಪ್ರೇಷಿತನಾಗಲು ನನ್ನನ್ನು ಪ್ರೇರೇಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೂದ್ಯರಿಗೆ ಅಪೊಸ್ತಲನಾಗಿ ಕೆಲಸ ಮಾಡಲು ದೇವರು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿ ಕೆಲಸ ಮಾಡಲು ನನಗೂ ವಹಿಸಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ, ಯೆಹೂದ್ಯರಿಗೆ ಅಪೊಸ್ತಲನಾಗಿರುವ ಪೇತ್ರನಲ್ಲಿ ಕಾರ್ಯಮಾಡಿದ ದೇವರೇ, ಯೆಹೂದ್ಯರಲ್ಲದವರಿಗೆ ನಾನು ಅಪೊಸ್ತಲನಾಗಿರಲು ನನ್ನಲ್ಲಿ ಕಾರ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್ ಸುನ್ನತ್ ಕರಲ್ಲ್ಯಾಂಚೊ ಅಪೊಸ್ತಲ್ ಹೊವ್ಕ್ ಪೆದ್ರುಕ್ ಎಚುನ್ ಕಾಡಲ್ಲ್ಯಾನುಚ್; ಜುದೆವ್ ನ್ಹಯ್ ಹೊತ್ತ್ಯಾಂಚೊ ಅಪೊಸ್ತಲ್ ಹೊವ್ಕ್ ಮನುನ್ ಮಾಕಾಬಿ ಎಚುನ್ ಕಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:8
23 ತಿಳಿವುಗಳ ಹೋಲಿಕೆ  

ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.


ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.


ಗುಂಪುಕೂಡಿದ್ದವರೆಲ್ಲರು ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೂ ಅಪೊಸ್ತಲನಾಗಿದ್ದೇನೆ. ನಾನು ಅಪೊಸ್ತಲನಾಗಿದ್ದೇನೆಂಬದಕ್ಕೆ ಕರ್ತನಿಗೆ ಸೇರಿದವರಾದ ನೀವೇ ಪ್ರಮಾಣವಾಗಿದ್ದೀರಷ್ಟೆ.


ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು ಯಾತರಿಂದಾಯಿತು? ನೀವು ನೇಮನಿಷ್ಠೆಗಳನ್ನನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ನಂಬಿದ್ದರಿಂದಲೇ.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು