Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:9 - ಕನ್ನಡ ಸತ್ಯವೇದವು J.V. (BSI)

9 ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:9
32 ತಿಳಿವುಗಳ ಹೋಲಿಕೆ  

ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.


ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.


ದೈವಪ್ರೇರಣೆಗನುಸಾರವಾಗಿ ಹೋದೆನು. ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬದನ್ನು ಅಲ್ಲಿದ್ದವರಿಗೆ ತಿಳಿಸಿದೆನು. ಆದರೆ ನಾನು ಪಡುತ್ತಿರುವ ಪ್ರಯಾಸವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ನಾವು ಕಂಡು ಕೇಳಿದ್ದು ನಿಮಗೂ ಗೊತ್ತಾಗಿ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದು.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಆದರೆ ಒಂದು ವೇಳೆ ನಾನು ತಡಮಾಡಿದರೂ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ.


ದೇವಜನರಿಗೆ ಸಹಾಯಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗುವಂತೆ ಅಪ್ಪಣೆಯಾಗಬೇಕೆಂದು ನಮ್ಮನ್ನು ಬಹಳವಾಗಿ ಬೇಡಿಕೊಂಡರು.


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಆದರೂ ನಿಮಗೆ ಜ್ಞಾಪಕಕೊಡಬೇಕೆಂದು ಅಲ್ಲಲ್ಲಿ ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವದಕ್ಕೆ ನನಗೆ ದೇವರ ಅನುಗ್ರಹವಾಯಿತು. ನಾನು ದೇವರ ಸುವಾರ್ತೆಯ ಸೇವೆಯನ್ನು ಯಾಜಕಸೇವೆ ಎಂಬಂತೆ ನಡಿಸಿ ಅನ್ಯದೇಶಸ್ಥರೆಂಬ ಕಾಣಿಕೆಯು ಪವಿತ್ರಾತ್ಮನ ಮೂಲಕವಾಗಿ ಪವಿತ್ರವಾಗಿದ್ದು ದೇವರಿಗೆ ಸಮರ್ಪಕವಾಗುವಂತೆ ಯತ್ನೈಸುವವನಾಗಿದ್ದೇನೆ.


ಅವರು ಮಾತಾಡುವದನ್ನು ಮುಗಿಸಿದ ಮೇಲೆ ಯಾಕೋಬನು ಆ ಪ್ರಸ್ತಾಪವನ್ನು ಹಿಡಿದು ಹೇಳಿದ್ದೇನಂದರೆ -


ಪೇತ್ರನು ಎದ್ದು ಅವರಿಗೆ - ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದದೆ.


ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಅವನು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ - ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸೂ ಯಥಾರ್ಥವಾಗಿರುತ್ತದೋ ಎಂದು ಕೇಳಿದನು. ಅವನು - ಹೌದು ಎಂದು ಉತ್ತರಕೊಟ್ಟನು. ಆಗ ಯೇಹುವು - ಹಾಗಾದರೆ ನಿನ್ನ ಕೈಕೊಡು ಅನ್ನಲು ಅವನು ಕೈಕೊಟ್ಟನು.


ಯೇಸು ಪೇತ್ರನಿಗೂ ಯೋಹಾನನಿಗೂ - ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ ಎಂದು ಹೇಳಿ ಅವರನ್ನು ಕಳುಹಿಸಿದನು.


ಅವನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. (ಮೆಸ್ಸೀಯನು ಅಂದರೆ ಕ್ರಿಸ್ತನು. ) ಯೇಸು ಅವನನ್ನು ನೋಡಿ - ನೀನು ಯೋಹಾನನ ಮಗನಾದ ಸೀಮೋನನು; ಇನ್ನು ಮೇಲೆ ಕೇಫನೆನಿಸಿಕೊಳ್ಳುವಿ ಅಂದನು (ಕೇಫನಂದರೆ ಪೇತ್ರ. )


ಆದರೆ ಅವನು ಸುಮ್ಮಗಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರರೆಲ್ಲರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಅತಿಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ.


ನಾನು ಹೀಗೆ ಬರೆದು ಬುದ್ಧಿಹೀನನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಕೇವಲ ಅಲ್ಪನಾದರೂ ಅತಿ ಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಆ ಜನರಿಗಿಂತ ಒಂದರಲ್ಲಿಯಾದರೂ ಕಡಿಮೆಯಾಗಲಿಲ್ಲ.


ತನ್ನ ಮಗನನ್ನು ನಾನು ಅನ್ಯಜನರಲ್ಲಿ ಪ್ರಸಿದ್ಧಿಪಡಿಸುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಫೈಸಿದಾಗಲೇ ನಾನು ಮನುಷ್ಯರ ಆಲೋಚನೆಯನ್ನು ವಿಚಾರಿಸದೆ


ಮೂರು ವರುಷಗಳಾದ ಮೇಲೆ ಕೇಫನ ಪರಿಚಿತಿಯನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇವಿುಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.


ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇವಿುಗೆ ಹೋದೆನು.


ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿದವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು