ಗಲಾತ್ಯದವರಿಗೆ 3:13 - ಕನ್ನಡ ಸತ್ಯವೇದವು J.V. (BSI)13 ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ ಸರಾಪಾತ್ ಹೊತ್ತ್ಯಾ ಅಮ್ಕಾ ಖಾಯ್ದ್ಯಾನ್ ಹಾನ್ತಲ್ಯಾ ಸರಾಪಾತ್ನಾ ಸೊಡ್ವುಸಾಟ್ನಿ; ಕ್ರಿಸ್ತಾನ್ ತೊ ಸರಾಪ್ ಅಪ್ನಾ ವರ್‍ತಿ ಘೆಟ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ಜೆ ಕೊನಾಕ್ ಝಾಡಾಕ್ ಲೊಂಬಾತ್ ಘಾಟಲ್ಲೆ ಹಾಯ್ ತೊ ದೆವಾಚ್ಯಾ ಸರಾಪಾತ್ ಹಾಯ್”. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.