Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:14 - ಕನ್ನಡ ಸತ್ಯವೇದವು J.V. (BSI)

14 ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ದೆವಾನ್ ಅಬ್ರಾಹಾಮಾಕ್ ಗೊಸ್ಟ್ ದಿವ್ನ್ ದಿಲ್ಲೊ ಆಶಿರ್ವಾದ್ ಕ್ರಿಸ್ತ್ ಜೆಜುಚ್ಯಾ ವೈನಾ ಜುದೆವ್ ನ್ಹಯ್ ಹೊತ್ತ್ಯಾಕ್ನಿಬಿ ದಿವ್ನ್ ಹೊವ್ಚೆ, ಅನಿ ವಿಶ್ವಾಸಾಚ್ಯಾ ವೈನಾ ಅಮಿ ದೆವಾನ್ ಗೊಸ್ಟ್ ದಿಲ್ಲೊ ಆತ್ಮೊ ಘೆವ್ಚೆ ಮನುನ್ ಕ್ರಿಸ್ತಾನ್ ಅಸೆ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:14
48 ತಿಳಿವುಗಳ ಹೋಲಿಕೆ  

ಯೆಹೂದ್ಯರಾಗಲಿ ಗ್ರೀಕರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗುವದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು; ಒಂದೇ ಆತ್ಮ ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿತು.


ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ?


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ


ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ಆತನಲ್ಲಿ ನೀವು ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವದಕ್ಕಾಗಿ ನಮ್ಮ ಸಂಗಡ ಕಟ್ಟಲ್ಪಡುತ್ತಾ ಇದ್ದೀರಿ.


ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಈ ಕಾರ್ಯಗಳಿಗೆ ನಾವು ಸಾಕ್ಷಿ; ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿ ಎಂದು ಹೇಳಿದರು.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.


ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.


ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು