Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:15 - ಕನ್ನಡ ಸತ್ಯವೇದವು J.V. (BSI)

15 ಸಹೋದರರೇ, ಲೋಕದ ವ್ಯವಹಾರವನ್ನು ಹಿಡಿದು ಮಾತಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ, ಅದಕ್ಕೆ ಹೆಚ್ಚು ಮಾತುಗಳನ್ನು ಕೂಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಿಯ ಸಹೋದರರೇ, ದೈನಂದಿನ ಜೀವನದಿಂದ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ: ಒಬ್ಬನು ಮತ್ತೊಬ್ಬನೊಡನೆ ಒಂದು ಒಪ್ಪಂದ ಮಾಡಿಕೊಳ್ಳುತ್ತಾನೆ. ಕ್ರಮಬದ್ಧವಾಗಿ ಅದನ್ನು ಮಾಡಿ ಮುಗಿಸಿದ ಮೇಲೆ ಯಾರೂ ಅದನ್ನು ರದ್ದುಮಾಡುವಂತಿಲ್ಲ, ಬದಲಾಯಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪ್ರಿಯರೇ, ನಾನು ದಿನನಿತ್ಯದ ವ್ಯವಹಾರದಂತೆ ಮಾತನಾಡುತ್ತಿದ್ದೇನೆ. ಮತ್ತೊಬ್ಬನೊಡನೆ ಯಾರಾದರೂ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದ ಮೇಲೆ ಯಾರೂ ಅದನ್ನು ರದ್ದು ಮಾಡುವುದಿಲ್ಲ, ಇಲ್ಲವೆ ಕೂಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಎಕ್ ಉದಾರನ್ ದಿತಾ ಎಕ್ಲೊ ಅನಿ ಎಕ್ಲ್ಯಾ ವಾಂಗ್ಡಾ ಗೊಸ್ಟ್ ದಿತಲ್ಯಾ ವಿಶಯಾತ್ ಚಿಂತುನ್ ಬಗಾ, ದೊಗೆ ಜಾನಾನಿ ಎಕ್ ಕರಾರಾಕ್ ತಯಾರ್ ಹೊವ್ನ್ ತೆನಿ ಸಹಿ ಘಾಟಲ್ಲ್ಯಾ ತನ್ನಾ ಕೊನ್‍ಬಿ ತೆ ಮೊಡುಕ್ ಹೊಯ್ನಾ, ನಾಜಾಲ್ಯಾರ್ ತೆಕಾ ಕಾಯ್ಬಿ ಜಾಸ್ತಿಚೆ ಮಿಳ್ವುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:15
10 ತಿಳಿವುಗಳ ಹೋಲಿಕೆ  

ಮರಣಶಾಸನವು ಮರಣವಾದ ಮೇಲೆ ನಡೆಯುವದೇ ಹೊರತು ಬರೆಯಿಸಿದವನು ಜೀವದಿಂದಿರುವಾಗ ಎಂದಿಗೂ ಸಲ್ಲುವದಿಲ್ಲ.


ನಿಮ್ಮ ನರಭಾವದ ಬಲಹೀನತೆಯ ದೆಸೆಯಿಂದ ಲೋಕರೀತಿಯಾಗಿ ಮಾತಾಡುತ್ತೇನೆ. ಅಧರ್ಮಮಾಡುವದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ ಅಧರ್ಮಕ್ಕೂ ದಾಸರನ್ನಾಗಿ ಒಪ್ಪಿಸಿಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.


ನಾವು ನೀತಿ ತಪ್ಪಿನಡೆಯುವದರಿಂದ ದೇವರಲ್ಲಿರುವ ನೀತಿ ಪ್ರಸಿದ್ಧಿಗೆ ಬರುವದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಸ್ಥನೇನು? (ಈ ಮಾತನ್ನು ಲೋಕರೀತಿಯಾಗಿ ಆಡಿದ್ದೇನೆ.) ಎಂದಿಗೂ ಅಲ್ಲ.


ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.


ದೇವರು ಅಬ್ರಹಾಮನಿಗೆ ವಾಗ್ದಾನಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದರಿಂದ ತನ್ನಾಣೆಯಿಟ್ಟು -


ಮನುಷ್ಯರು ತಮಗಿಂತ ಹೆಚ್ಚಿನವನ ಆಣೆಯಿಡುತ್ತಾರಷ್ಟೆ; ಮಾತಿಗೆ ಆಣೆಯಿಟ್ಟು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು