Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:19 - ಕನ್ನಡ ಸತ್ಯವೇದವು J.V. (BSI)

19 ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವ ತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇವಿುಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹಾಗಾದರೆ ಧರ್ಮಶಾಸ್ತ್ರದ ಉದ್ದೇಶವಾದರೂ ಏನು? ಅಪರಾಧದ ಅರಿವನ್ನು ಮೂಡಿಸುವುದಕ್ಕಾಗಿ ಅದನ್ನು ಕಾಲಕ್ರಮೇಣ ಸೇರಿಸಲಾಯಿತು. ದೇವವಾಗ್ದಾನವನ್ನು ಪಡೆದ ಆ ಸಂತತಿ ಬರುವ ತನಕ ಮಾತ್ರ ಅದು ಇರಲೆಂದು ಕೊಡಲಾಯಿತು. ಅಲ್ಲದೆ, ಕೇವಲ ದೇವದೂತರ ಮುಖಾಂತರ, ಒಬ್ಬ ಮಾನವ ಮಧ್ಯಸ್ಥನ ಮೂಲಕ ಮಾತ್ರ ಅದನ್ನು ನೀಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಸೆ ಹೊಲ್ಯಾರ್ ಖಾಯ್ದ್ಯಾಚೊ ಉದ್ದೆಸ್ ಕಾಯ್? ಹೆ ಖಾಲಿ ಚುಕ್ ಖಲೆ ಮನುನ್ ದಾಕ್ವುಸಾಟ್ನಿ ಹಾಯ್, ಅನಿ ಹಿ ಗೊಸ್ಟ್ ಕರಲ್ಲಿ ಅಬ್ರಾಹಾಮಾಚಿ ಪಿಳ್ಗಿ ಯೆಯ್ ಪಾತರ್ ಮನುನ್ ಹೊತ್ತೆ. ಖಾಯ್ದೊ ದೆವಾಚ್ಯಾ ದುತಾಂಚ್ಯಾ ವೈನಾ ಎಕ್ ಮಾನ್ಸಾಕ್ ಮಧ್ಯಸ್ತ್ ಕರುನ್ ದಿವ್ನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:19
31 ತಿಳಿವುಗಳ ಹೋಲಿಕೆ  

ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವದಿಲ್ಲ ಎಂದು ಹೇಳಿದನು.


ಯಾಕಂದರೆ ದೇವದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯವಾದ ಪ್ರತಿಫಲವುಂಟಾದ ಮೇಲೆ [ನಮ್ಮ ಮುಂದಿಟ್ಟಿರುವ]


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ಯಾಕಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದು. ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಮೀರೋಣವೆಂಬದೂ ಇಲ್ಲ.


ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.


ನಾನು ಬಂದು ಅವರ ಕೂಡ ಮಾತಾಡದಿದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಅವರು ಮಾಡಿದ ಪಾಪಕ್ಕಾಗಿ ಅವರಿಗೆ ಈಗ ನೆವವಿಲ್ಲ.


ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು ಬೆಟ್ಟವನ್ನು ಹತ್ತದೆಹೋಗಲಾಗಿ ನಾನು ಯೆಹೋವನಿಗೂ ನಿಮಗೂ ನಡುವೆ ನಿಂತು ಆತನು ಆಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನಂದರೆ -


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ನಾವು ಪ್ರಸ್ತಾಪಿಸುವ ಮುಂದಣ ಸಾಮ್ರಾಜ್ಯವನ್ನು ಆತನು ದೇವದೂತರಿಗೆ ಅಧೀನ ಮಾಡಲಿಲ್ಲವಲ್ಲಾ.


ಅಬ್ರಹಾಮನು ಅವನಿಗೆ - ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವದಿಲ್ಲ ಎಂದು ಹೇಳಿದನು.


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು