ಗಲಾತ್ಯದವರಿಗೆ 3:2 - ಕನ್ನಡ ಸತ್ಯವೇದವು J.V. (BSI)2 ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮಾಕಾ ತುಮಿ ಎಕ್ ಸಾಂಗಾ: ತುಮಿ ದೆವಾಚೊ ಆತ್ಮೊ ಖಾಯ್ದೊ ಕಾಯ್ ಸಾಂಗ್ತಾ ತೆ ಕರುನ್ ಜೊಡುನ್ ಘೆಟ್ಲ್ಯಾಶಿ, ಕಾಯ್ ಬರಿ ಖಬರ್ ಆಯ್ಕುನ್ ಅನಿ ತೆಚ್ಯಾ ವರ್‍ತಿ ವಿಶ್ವಾಸ್ ಕರುನ್ ಜೊಡುನ್ ಘೆಟ್ಲ್ಯಾಶಿ? ಅಧ್ಯಾಯವನ್ನು ನೋಡಿ |
ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.