Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:21 - ಕನ್ನಡ ಸತ್ಯವೇದವು J.V. (BSI)

21 ಹಾಗಾದರೆ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳುಕೊಳ್ಳಬಾರದು. ಬದುಕಿಸುವದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಸಂದೇಹವಿಲ್ಲದೆ ಕರ್ಮಮಾರ್ಗದಿಂದಲೇ ನೀತಿಯುಂಟಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆಚೊ ಅರ್ಥ್ ಖಾಯ್ದೊ ದೆವಾಚ್ಯಾ ಗೊಸ್ಟಿಯಾಕ್ನಿ ವಿರೊದ್ ಹೊವ್ನ್ ಹಾಯ್ ಮನುನ್ ಹೊಲೆ ಕಾಯ್? ಕನ್ನಾಚ್ ನಾ! ಕಶ್ಯಾಕ್ ಮಟ್ಲ್ಯಾರ್ ಜೆ ಮಾನ್ಸಾಕ್ನಾ ಘೆಟಲ್ಲೊ ಖಾಯ್ದೊ ಜಿವ್ ಹಾನ್ತಾ ಮಟ್ಲ್ಯಾರ್, ತೆಕಾ ಖಾಲ್ತಿ ಹೊವ್ನ್ ಚಲುನ್ ದೆವಾಚ್ಯಾ ವಾಂಗ್ಡಾ ಜಾವ್ನ್ ನಿತಿವಂತ್ ಮನುನ್ ಘೆವ್ಕ್ ಹೊಯ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:21
18 ತಿಳಿವುಗಳ ಹೋಲಿಕೆ  

ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ಕರ್ಮಮಾರ್ಗದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದಕ್ಕೆ ಕಾರಣವೇ ಇಲ್ಲ.


ಆದರೆ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಬೇಕೆಂದು ಪ್ರಯತ್ನಿಸಿದರೂ ಆ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.


ನಾನಂತೂ ದೇವರಿಗಾಗಿ ಜೀವಿಸುವದಕ್ಕೋಸ್ಕರ ಧರ್ಮಪ್ರಮಾಣದ ಮೂಲಕವಾಗಿ ಧರ್ಮಪ್ರಮಾಣದ ಪಾಲಿಗೆ ಸತ್ತೆನು.


ಆದರೆ ನಾವು ಕ್ರಿಸ್ತನ ಆಶ್ರಯದಲ್ಲಿ ನೀತಿವಂತರೆಂಬ ನಿರ್ಣಯ ಹೊಂದುವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನೆಂದು ಹೇಳಬೇಕೇನು? ಎಂದಿಗೂ ಹೇಳಬಾರದು.


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.


ದೇವರು ಅನ್ಯಾಯಸ್ಥನಾಗಿದ್ದರೆ ಲೋಕಕ್ಕೆ ಹೇಗೆ ನ್ಯಾಯತೀರಿಸಾನು?


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.


ಮರಣವಿಧಿಸುವ ನಿಯಮದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿ ಆಧಾರಗೊಂಡಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು. ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿಹೋಗುವಂಥದಾಗಿದ್ದರೂ ಅದರ ನಿವಿುತ್ತ ಇಸ್ರಾಯೇಲ್ಯರು ಅವನ ಮುಖವನ್ನು ನೋಡಲಾರದೆ ಇದ್ದರು.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ಯಾಜಕನಾಗಿದ್ದೀ ಎಂದು ಹೇಳಿಯದೆಯಲ್ಲಾ.


ಧರ್ಮಶಾಸ್ತ್ರವು ಯಾವದನ್ನೂ ಸಿದ್ಧಿಗೆ ತಾರದೆ ಇರುವದರಿಂದ ಮೊದಲಿದ್ದ ನಿಯಮವು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ರದ್ದಾಗಿಹೋಯಿತು. ಅದಕ್ಕೆ ಬದಲಾಗಿ ಉತ್ತಮವಾಗಿರುವ ಒಂದು ನಿರೀಕ್ಷಾಧಾರವು ಪ್ರಾಬಲ್ಯಕ್ಕೆ ಬಂತು. ಈ ನಿರೀಕ್ಷಾಧಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸುವಂಥದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು