Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:23 - ಕನ್ನಡ ಸತ್ಯವೇದವು J.V. (BSI)

23 ಕ್ರಿಸ್ತನಂಬಿಕೆಯ ಕಾಲ ಬರುವದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವದಕ್ಕಾಗಿ ಧರ್ಮಶಾಸ್ತ್ರದ ಕೈಕೆಳಗೆ ಕಾವಲಲ್ಲಿ ಮುಚ್ಚಲ್ಪಟ್ಟಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಕ್ರೈಸ್ತವಿಶ್ವಾಸದ ಕಾಲವು ಬರುವುದಕ್ಕೆ ಮೊದಲು ನಾವು ಧರ್ಮಶಾಸ್ತ್ರದ ನಿರ್ಬಂಧಕ್ಕೆ ಒಳಗಾಗಿ ಕೈದಿಗಳಂತೆ ಇದ್ದೆವು. ಈ ವಿಶ್ವಾಸವು ಪ್ರಕಟವಾಗುವವರೆಗೂ ಇದೇ ಪರಿಸ್ಥಿತಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಈ ನಂಬಿಕೆಯು ಬರುವುದಕ್ಕಿಂತ ಮೊದಲು ನಾವು ಧರ್ಮಶಾಸ್ತ್ರಕ್ಕೆ ಸೆರೆಯಾಳುಗಳಾಗಿದ್ದೆವು. ಬರಲಿದ್ದ ನಂಬಿಕೆಯ ಮಾರ್ಗವನ್ನು ದೇವರು ನಮಗೆ ತೋರಿಸಿಕೊಡುವ ತನಕ ನಮಗೆ ಸ್ವತಂತ್ರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಂಬಿಕೆ ಬರುವುದಕ್ಕೆ ಮುಂಚೆ ನಾವು ನಿಯಮದ ಅಧೀನದಲ್ಲಿ ಇದ್ದೆವು. ಬರಲಿರುವ ಆ ನಂಬಿಕೆಯು ಪ್ರಕಟವಾಗುವ ತನಕ ನಾವು ಸೆರೆಯಾದವರಂತೆ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ವಿಶ್ವಾಸಾಚೊ ಎಳ್ ಎವ್ಡ್ಯಾ ಅದ್ದಿ ಖಾಯ್ದ್ಯಾನ್ ಅಮ್ಕಾ ಯೆತಲೊ ವಿಶ್ವಾಸ್ ದಿಸಿ ಪಾತರ್ ಬಂದಿ ಕರುನ್ ಥವಲ್ಲ್ಯಾನ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:23
15 ತಿಳಿವುಗಳ ಹೋಲಿಕೆ  

ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನೇಮನಿಷ್ಠೆಗಳಿಗೆ ಅಧೀನರಲ್ಲ.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವ ತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇವಿುಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.


ಯಾಕಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಃಸ್ಥಿತಿಯಲ್ಲಿ ಕಟ್ಟಿಹಾಕಿದ್ದಾನೆ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಇವರೆಲ್ಲರು ವಾಗ್ದಾನದ ಫಲಗಳನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ಉಲ್ಲಾಸದೊಡನೆ ವಂದಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂವಿುಯ ಮೇಲೆ ಪರದೇಶದವರೂ ಪ್ರವಾಸಿಗಳೂ ಆಗಿದ್ದೇವೆಂದು ಒಪ್ಪಿಕೊಂಡರು.


ಧರ್ಮಶಾಸ್ತ್ರಾಧೀನರಾಗುವದಕ್ಕೆ ಮನಸ್ಸುಳ್ಳವರೇ, ಧರ್ಮಶಾಸ್ತ್ರಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು