Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:26 - ಕನ್ನಡ ಸತ್ಯವೇದವು J.V. (BSI)

26 ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26-27 ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕಶ್ಯಾಕ್ ಮಟ್ಲ್ಯಾರ್ ತುಮಿ ಸಗ್ಳೆ ವಿಶ್ವಾಸಾಚ್ಯಾ ವೈನಾ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾತ್ ದೆವಾಚಿ ಪೊರಾ ಹೊಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:26
27 ತಿಳಿವುಗಳ ಹೋಲಿಕೆ  

ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷವಿುಸಿದನಲ್ಲಾ; ಆದದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.


ತನ್ನ ಮೂಲಕವಾಗಿ ಎಲ್ಲರು ನಂಬುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕೆ ಬಂದನು.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲೆಲ್ಲಾ ಇರುವ ದೇವಜನರೆಲ್ಲರಿಗೂ ಬರೆಯುವದೇನಂದರೆ -


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ನನ್ನ ಶರೀರದಲ್ಲಿ ನಿಮ್ಮ ಬೇಸರಿಕೆಗೆ ಆಸ್ಪದವಾದದ್ದನ್ನು ನೀವು ಹೀನೈಸಲಿಲ್ಲ, ಓಕರಿಸಲಿಲ್ಲ; ನನ್ನನ್ನು ದೇವದೂತನಂತೆ ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿರಿ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ ಸ್ವೇಚ್ಫಾಭಿಲಾಷೆ ಸಹಿತ ಶಿಲುಬೆಗೆ ಹಾಕಿದವರು.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.


ಆದದರಿಂದ ನೀವು ಕರ್ತನಾದ ಯೇಸುವೆಂಬ ಕ್ರಿಸ್ತನನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದುಕೊಳ್ಳಿರಿ.


ಕ್ರಿಸ್ತ ಯೇಸುವಿನ ಸೆರೆಯವನಾಗಿರುವ ಪೌಲನೂ ಸಹೋದರನಾದ ತಿಮೊಥೆಯನೂ ನಮಗೆ ಪ್ರಿಯನೂ ಜೊತೆಕೆಲಸದವನೂ ಆಗಿರುವ ಫಿಲೆಮೋನನೆಂಬ ನಿನಗೂ


ಹಾಗೆ ಆಜ್ಞಾಪಿಸದೆ ಮುದುಕನೂ ಈಗ ಕ್ರಿಸ್ತ ಯೇಸುವಿನ ನಿವಿುತ್ತ ಸೆರೆಯವನೂ ಆಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿವಿುತ್ತ ನಿನ್ನನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು