Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:29 - ಕನ್ನಡ ಸತ್ಯವೇದವು J.V. (BSI)

29 ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರೂ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೀವು ಕ್ರಿಸ್ತನವರಾಗಿದ್ದೀರಿ. ಆದ್ದರಿಂದ ನೀವು ಅಬ್ರಹಾಮನ ಸಂತಾನದವರು. ದೇವರು ಅವನಿಗೆ ಮಾಡಿದ ವಾಗ್ದಾನದ ಪ್ರಕಾರ ನೀವೆಲ್ಲರೂ ದೇವರ ಆಶೀರ್ವಾದಗಳನ್ನು ಪಡೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತುಮಿ ಕ್ರಿಸ್ತಾಚಿ ಲೊಕಾ ಹೊಯ್ ಹೊಲ್ಯಾಸಿ ಹೊಲ್ಯಾರ್, ತುಮಿ ಅಬ್ರಾಹಾಮಾಚಿ ಪಿಳ್ಗಿ ಅನಿ ದೆವಾನ್ ಜೆ ಕಾಯ್ ಗೊಸ್ಟ್ ದಿಲ್ಯಾನಾಯ್ ತೆಚೆ ತುಮಿಬಿ ವಾರಿಸ್ದಾರ್ ಹೊತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:29
26 ತಿಳಿವುಗಳ ಹೋಲಿಕೆ  

ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.


ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ಬಾಧ್ಯನೂ ಆಗಿದ್ದೀ.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ನೀವು ಮುಖದ ಮುಂದೆ ಇರುವಂಥದನ್ನು ನೋಡಿರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳುಕೊಳ್ಳಲಿ.


ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ ಸ್ವೇಚ್ಫಾಭಿಲಾಷೆ ಸಹಿತ ಶಿಲುಬೆಗೆ ಹಾಕಿದವರು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಆ ಬಾಧ್ಯತೆಯು ಕರ್ಮಮಾರ್ಗದಿಂದ ದೊರೆಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯುವದಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.


ಆದರೆ ನಾನು ಹೇಳುವದೇನಂದರೆ ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆ ಇರುವನೇ ಹೊರತು ಬೇರೆಯಿಲ್ಲ.


ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರಿಗೆ ಅಂದರೆ ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ ಕರುಣೆಯೂ ಆಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು