Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:5 - ಕನ್ನಡ ಸತ್ಯವೇದವು J.V. (BSI)

5 ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು ಯಾತರಿಂದಾಯಿತು? ನೀವು ನೇಮನಿಷ್ಠೆಗಳನ್ನನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ನಂಬಿದ್ದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ದೆವಾನ್ ತುಮ್ಕಾ ಆತ್ಮೊ ದಿಲ್ಲೆ ಅನಿ ಆಜಾಪಾಚಿ ಕಾಮಾ ಕರಲ್ಲೆ ತುಮಿ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ಚಲುಲ್ಯಾಸಿ ಮನುನ್ ಕಾಯ್, ತುಮಿ ಬರಿ ಖಬರ್ ಆಯ್ಕುನ್ ತೆಚ್ಯಾ ವೈರ್ ವಿಶ್ವಾಸ್ ಕರ್ಲ್ಯಾಸಿ ಮನುನ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:5
14 ತಿಳಿವುಗಳ ಹೋಲಿಕೆ  

ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ?


ಕ್ರಿಸ್ತನು ನನ್ನಲ್ಲಿ ಮಾತಾಡುತ್ತಾನೆಂಬದಕ್ಕೆ ನಿಮಗೆ ಬೇಕಾದ ಪ್ರಮಾಣವು ಆಗ ತೋರಿಬರುವದು. ಆತನು ನಿಮ್ಮನ್ನು ಕುರಿತು ನಿರ್ಬಲನಾಗಿರದೆ ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.


ಹೀಗಿರಲಾಗಿ ಪೌಲ ಬಾರ್ನಬರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತಾಡುತ್ತಿದ್ದರು.


ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವದರಲ್ಲಿಯೂ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ತೋರಿದವು.


ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕು.


ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ.


ಆದಕಾರಣ ಸಾರಿದ ವಾರ್ತೆಯು ನಂಬಿಕೆಗೆ ಆಧಾರ, ಆ ವಾರ್ತೆಗೆ ಕ್ರಿಸ್ತನ ವಾಕ್ಯವೇ ಆಧಾರ.


ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಆಹಾರವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು