Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:13 - ಕನ್ನಡ ಸತ್ಯವೇದವು J.V. (BSI)

13 ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ಸರ್ತಿ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲೇ ಇದ್ದು ಮೊತ್ತಮೊದಲ ಬಾರಿಗೆ ಶುಭಸಂದೇಶವನ್ನು ನಿಮಗೆ ಸಾರಲು ಆಸ್ಪದವಾಯಿತು. ಇದನ್ನು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮೊದಲು ನೀವು ನನಗೆ ಬಹು ಒಳ್ಳೆಯವರಾಗಿದ್ದಿರಿ. ನಾನು ನಿಮ್ಮ ಬಳಿಗೆ ಮೊದಲನೆ ಸಲ ಬಂದದ್ದು ನನ್ನ ಅನಾರೋಗ್ಯದ ನಿಮಿತ್ತವೆಂದು ನಿಮಗೆ ಗೊತ್ತಿದೆ. ನಾನು ನಿಮಗೆ ಸುವಾರ್ತೆಯನ್ನು ತಿಳಿಸಿದ್ದು ಆವಾಗಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಮುಂಚೆ ನಿಮಗೆ ಸುವಾರ್ತೆ ಸಾರಿದ್ದು, ನನ್ನ ಶರೀರದ ಬಲಹೀನತೆಯಿಂದ ಎಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅದ್ದಿ ಫಾಟಿ ಮಿಯಾ ತುಮ್ಕಾ ಬರಿ ಖಬರ್ ಕಶ್ಯಾಕ್ ಸಾಂಗಟಲ್ಲೊ ಮನ್ತಲಿ ತುಮ್ಕಾ ಯಾದ್ ಅಸಿಲ್; ಕಶ್ಯಾಕ್ ಕಾಯ್ ಮಟ್ಲ್ಯಾರ್ ಮಿಯಾ ಶಿಕ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:13
13 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ ಭಯಪಡುವವನೂ ಬಹು ನಡುಗುವವನೂ ಆಗಿದ್ದೆನು.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯನ್ನು ಹಿಡಿದಿರುವದಕ್ಕೆ ಆಶ್ಚರ್ಯಪಡುತ್ತೇನೆ.


ನಾನು ಹೊಗಳಿಕೊಳ್ಳಬೇಕಾದರೆ ನನ್ನ ಬಲಹೀನತೆಯನ್ನು ತೋರ್ಪಡಿಸುವ ವಿಷಯಗಳಲ್ಲಿ ಹೊಗಳಿಕೊಳ್ಳುವೆನು.


ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ನಿಪುಣನಾಗಿದ್ದೇನೆ; ಇದನ್ನು ಎಲ್ಲಾ ಕಾರ್ಯಗಳಲ್ಲಿ ಎಲ್ಲರ ಮುಂದೆ ನಿಮ್ಮ ಪ್ರಯೋಜನಕ್ಕಾಗಿ ತೋರ್ಪಡಿಸಿದ್ದೇವೆ.


ಅವನಿಂದ ಬಂದ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆ ಬಾರದ್ದು ಅನ್ನುತ್ತಾರೆ.


ಆತನು ಬಲಹೀನಾವಸ್ಥೆಯಲ್ಲಿದ್ದದರಿಂದ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಬದುಕುತ್ತಾನೆ. ನಾವು ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ; ಆದರೂ ಆತನೊಂದಿಗೆ ದೇವರ ಬಲದಿಂದ ಬದುಕುವವರಾಗಿದ್ದೇವೆ; ಇದು ನಿಮಗೆ ತೋರಿಬರುವದು.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಫ್ರುಗ್ಯ ಗಲಾತ್ಯ ಸೀಮೆಯನ್ನು ಹಾದುಹೋಗಿ


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಸಹೋದರರೇ, ನಾನು ನಿಮ್ಮ ಹಾಗೆ ಆದದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯಮಾಡಲಿಲ್ಲ.


ನನ್ನ ಶರೀರದಲ್ಲಿ ನಿಮ್ಮ ಬೇಸರಿಕೆಗೆ ಆಸ್ಪದವಾದದ್ದನ್ನು ನೀವು ಹೀನೈಸಲಿಲ್ಲ, ಓಕರಿಸಲಿಲ್ಲ; ನನ್ನನ್ನು ದೇವದೂತನಂತೆ ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿರಿ.


ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಮೆಚ್ಚಿಸಿಕೊಳ್ಳುವದು ಒಳ್ಳೇದೇ.


ಯಾವನಾದರೂ ತಲೆಯ ಕೂದಲು ಉದುರಿಹೋದದರಿಂದ ಬೋಳತಲೆಯವನಾದರೂ ಅವನು ಶುದ್ಧನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು