Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:14 - ಕನ್ನಡ ಸತ್ಯವೇದವು J.V. (BSI)

14 ನನ್ನ ಶರೀರದಲ್ಲಿ ನಿಮ್ಮ ಬೇಸರಿಕೆಗೆ ಆಸ್ಪದವಾದದ್ದನ್ನು ನೀವು ಹೀನೈಸಲಿಲ್ಲ, ಓಕರಿಸಲಿಲ್ಲ; ನನ್ನನ್ನು ದೇವದೂತನಂತೆ ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನನ್ನ ದೇಹಸ್ಥಿತಿ ನಿಮಗೆ ಬೇಸರವನ್ನುಂಟುಮಾಡುವಂಥದ್ದಾಗಿದ್ದರೂ ನೀವು ನನ್ನನ್ನು ತಿರಸ್ಕರಿಸಲಿಲ್ಲ; ಅಸಹ್ಯಪಡಲಿಲ್ಲ. ನನ್ನನ್ನು ದೇವದೂತನಂತೆ ಏಕೆ, ಕ್ರಿಸ್ತಯೇಸುವಿನಂತೆಯೇ ಭಾವಿಸಿ ಉಪಚರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಅನಾರೋಗ್ಯವು ನಿಮಗೆ ಹೊರೆಯಾಗಿತ್ತು. ಆದರೆ ನೀವು ನನ್ನ ವಿಷಯದಲ್ಲಿ ಬೇಸರಮಾಡಿಕೊಳ್ಳಲಿಲ್ಲ. ನೀವು ನನ್ನನ್ನು ಕಳುಹಿಸಿಬಿಡಲಿಲ್ಲ. ದೇವದೂತನೋ ಎಂಬಂತೆ ನೀವು ನನ್ನನ್ನು ಸ್ವಾಗತಿಸಿದಿರಿ; ಸ್ವತಃ ಯೇಸು ಕ್ರಿಸ್ತನೋ ಎಂಬಂತೆ ನನ್ನನ್ನು ಸ್ವೀಕರಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಮಾಜೆ ಶಿಕ್‍ಪಾನ್ ಎಕ್ ಮೊಟಿ ಪರಿಕ್ಷಾ ಸಾರ್ಕೆ ತುಮ್ಕಾ ಹೊತ್ತೆ , ಜಾಲ್ಯಾರ್ಬಿ ತುಮಿ ಮಾಕಾ ಧುರ್ ಕರುಕ್‌ನ್ಯಾಶಿ, ನಾಹೊಲ್ಯಾರ್ ಕಿಳ್ ಕರುನ್ ಬಗುಕ್‌ನ್ಯಾಶಿ. ತೆಚ್ಯಾ ಬದ್ಲಾಕ್ ತುಮಿ ಮಾಕಾ ಸರ್ಗಾ ವೈಲ್ಯಾ ದೆವಾಚ್ಯಾ ದುತಾ ಸಾರ್ಕೆ ಸ್ವಾಗತ್ ಕರ್ಲ್ಯಾಸಿ ಅನಿ ಕ್ರಿಸ್ತಾ ಜೆಜುಕ್ ಸ್ವಿಕಾರ್ ಕರ್ಲ್ಯಾ ಸಾರ್ಕೆ ತುಮಿ ಸ್ವಿಕಾರ್ ಕರ್ಲ್ಯಾಸಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:14
23 ತಿಳಿವುಗಳ ಹೋಲಿಕೆ  

ನಿಮ್ಮನ್ನು ಸೇರಿಸಿಕೊಳ್ಳುವವನು ನನ್ನನ್ನು ಸೇರಿಸಿಕೊಳ್ಳುವವನಾಗಿದ್ದಾನೆ; ನನ್ನನ್ನು ಸೇರಿಸಿಕೊಳ್ಳುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಳ್ಳುವವನಾಗಿದ್ದಾನೆ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .


ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.


ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ, ತನಗೆ ಸರಿಕಂಡದ್ದನ್ನು ಮಾಡಲಿ.


ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿರುತ್ತಾನೆ; ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ ಅಂದಳು.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ಸರ್ತಿ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.


ನಾವಂತು ಕ್ರಿಸ್ತನ ನಿವಿುತ್ತ ಹುಚ್ಚರಾಗಿದ್ದೇವೆ, ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ನೀವು ಬಲಿಷ್ಠರು; ನೀವು ಮಾನಶಾಲಿಗಳು, ನಾವು ಮಾನಹೀನರು.


ದೇವರು ಈ ಲೋಕದ ಕುಲಹೀನರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವದಕ್ಕಾಗಿ ಗಣನೆಗೆ ಬಾರದವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಾನು ಕಳುಹಿಸಿಕೊಟ್ಟವನನ್ನು ಅಂಗೀಕರಿಸುವವನು ನನ್ನನ್ನು ಅಂಗೀಕರಿಸುವವನಾಗಿದ್ದಾನೆ; ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ಅಂಗೀಕರಿಸುವವನಾಗಿದ್ದಾನೆ.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು.


ನಾನು ಇದನ್ನು ನೋಡಿ, ಬಲಕ್ಕಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರಮಾಡಿ ಅವನ ಮಾತುಗಳನ್ನು ಗಮನಿಸರು ಅಂದುಕೊಂಡೆನು.


ನಾನು ಅಲ್ಪನೂ ತಿರಸ್ಕಾರಹೊಂದಿದವನೂ ಆಗಿದ್ದೇನೆ; ಆದರೂ ನಿನ್ನ ನೇಮಗಳನ್ನು ಮರೆಯುವದಿಲ್ಲ.


ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬದು ನೆಮ್ಮದಿಯಿಂದಿರುವವನ ಯೋಚನೆ;


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ; ಆ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು