ಗಲಾತ್ಯದವರಿಗೆ 4:17 - ಕನ್ನಡ ಸತ್ಯವೇದವು J.V. (BSI)17 ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಂಥವರಾಗಿರದೆ ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗಲಿಸುವದಕ್ಕೆ ಅಪೇಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗೆ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ನನ್ನಿಂದ ಆಗಲಿಸುವುದಕ್ಕೆ ಬಯಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ನನ್ನ ವಿರೋಧಿಗಳು ನಿಮ್ಮನ್ನು ಮೆಚ್ಚಿಸಲು ತುಂಬ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಆದರೆ ಅವರ ಉದ್ದೇಶ ಒಳ್ಳೆಯದಲ್ಲ. ನೀವು ಸಹ ಅವರನ್ನು ಅಷ್ಟೇ ಆಸಕ್ತಿಯಿಂದ ಮೆಚ್ಚಿಸಬೇಕೆಂಬುದೇ ಅವರ ಉದ್ದೇಶ. ಆದ್ದರಿಂದಲೇ ನಿಮ್ಮನ್ನು ನನ್ನಿಂದ ಬೇರ್ಪಡಿಸಲು ಯತ್ನಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿಮ್ಮನ್ನು ಒತ್ತಾಯಪಡಿಸುವುದಕ್ಕಾಗಿ ಆ ಜನರು ಪ್ರಯಾಸ ಪಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಒಳ್ಳೆಯ ಉದ್ದೇಶದಿಂದಲ್ಲ. ನೀವು ನಮಗೆ ವಿರುದ್ಧವಾಗಿ ತಿರುಗಿಬೀಳಬೇಕೆಂದು ಅವರು ನಿಮ್ಮನ್ನು ಒತ್ತಾಯಪಡಿಸುತ್ತಿದ್ದಾರೆ. ನೀವು ಅವರನ್ನೇ ಹೊರತು ಬೇರೆ ಯಾರನ್ನೂ ಅನುಸರಿಸಬಾರದೆಂಬುದು ಅವರ ಅಪೇಕ್ಷೆ. ನಿಮ್ಮ ವಿಷಯದಲ್ಲಿ ಜನರು ಆಸಕ್ತಿ ತೋರಿಸುವುದೇನೋ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರು ನಿಮ್ಮನ್ನು ಆಕರ್ಷಿಸಲು ಆಸಕ್ತರಾಗಿದ್ದಾರೆ. ಆದರೆ ಒಳ್ಳೆಯ ಅಭಿಪ್ರಾಯದಿಂದ ಅಲ್ಲ. ನೀವು ಅವರ ವಿಷಯದಲ್ಲಿ ಆಸಕ್ತರಾಗಬೇಕೆಂದು ಅವರು ನಿಮ್ಮನ್ನು ನಮ್ಮಿಂದ ಪ್ರತ್ಯೇಕಿಸುವುದಕ್ಕೆ ಅಪೇಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಹೆಚ್ಯಾಸಾಟ್ನಿ ಜೆ ಕೊನ್ ತುಮ್ಚ್ಯಾ ವರ್ತಿ ಉಮ್ಮೆದಿನ್ ರ್‍ಹಾತ್ಯಾತ್, ತಸೆಚ್ ತುಮಿಬಿ ತೆಂಚ್ಯಾ ವರ್‍ತಿ ಉಮ್ಮೆದಿನ್ ರ್‍ಹವ್ಚೆ ಮನುನ್ ತೆನಿ ಆಶಾ ಕರ್ತಾತ್. ಅಧ್ಯಾಯವನ್ನು ನೋಡಿ |