Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:18 - ಕನ್ನಡ ಸತ್ಯವೇದವು J.V. (BSI)

18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಮೆಚ್ಚಿಸಿಕೊಳ್ಳುವದು ಒಳ್ಳೇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ನಿಮ್ಮ ಬಳಿ ಇರಲಿ, ಇಲ್ಲದಿರಲಿ, ಬೇರೆಯವರು ನಿಮ್ಮಲ್ಲಿ ಅಷ್ಟು ಆಸಕ್ತರಾಗಿರುವುದು ಒಳ್ಳೆಯದೇ. ಆದರೆ ಅಂಥ ಆಸಕ್ತಿ ಸದುದ್ದೇಶದಿಂದ ಕೂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಅವರ ಉದ್ದೇಶವು ಒಳ್ಳೆಯದಾಗಿದ್ದಾಗ ಮಾತ್ರ ನಿಮಗೆ ಒಳ್ಳೆಯದಾಗುತ್ತದೆ. ಇದು ಸತ್ಯ. ನಾನು ನಿಮ್ಮೊಂದಿಗಿರುವಾಗಲೂ ನಿಮ್ಮಿಂದ ದೂರವಿರುವಾಗಲೂ ಇದು ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಉತ್ತಮ ಕಾರ್ಯಗಳಲ್ಲಿ ನೀವು ಆಸಕ್ತರಾಗಿರುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಉದ್ದೆಸ್ ಬರೊ ರ್‍ಹಾಲ್ಯಾರ್, ತಸ್ಲಿ ಬರಿ ಉಮ್ಮೆದ್ ಧರುನ್ ಘೆವ್ನ್ ರ್‍ಹಾತಲೆ ಬರೆ, ಹೆ ಕನ್ನಾಬಿ ಖರೆಚ್. ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:18
13 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ಸರ್ತಿ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ಮತಾಸಕ್ತಿಯು ನನ್ನನ್ನು ದಹಿಸಿಬಿಟ್ಟಿತು; ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದಾರಲ್ಲಾ.


ಆಗ - ನಿನ್ನ ಆಲಯಾಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತದೆ ಎಂದು ಬರೆದ ಮಾತು ಶಿಷ್ಯರ ನೆನಪಿಗೆ ಬಂತು.


ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತಿಳಿಯದು. ನಾನು ಈಗಲೂ ನಿಮ್ಮಲ್ಲಿದ್ದು ಬೇರೆ ರೀತಿಯಿಂದ ಮಾತಾಡುವದಕ್ಕೆ ಎಷ್ಟೋ ಆಶೆಪಡುತ್ತೇನೆ.


ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಂಥವರಾಗಿರದೆ ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗಲಿಸುವದಕ್ಕೆ ಅಪೇಕ್ಷಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು