Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:24 - ಕನ್ನಡ ಸತ್ಯವೇದವು J.V. (BSI)

24 ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು; ಅದೇ ಹಾಗರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಈ ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಈ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಈ ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಆ ಒಡಂಬಡಿಕೆಯಂತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ಸಂಗತಿಗಳು ಉಪಮಾನವಾಗಿವೆ. ಹೇಗೆಂದರೆ, ಇವರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು. ಅದೇ ಹಾಗರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹಿ ಸಂಗ್ತಿಯಾ ಪ್ರತಿ ರುಪಾಚ್ಯಾ ರಿತಿನ್ ಕಳ್ವುನ್ ಘೆವ್ಕ್ ಹೊತಾ: ದೊನ್‍ ಬಾಯ್ಕೊಮಾನ್ಸಾ ದೊನ್ ಕರಾರಾ ದಾಕ್ವುನ್ ದಿತ್ಯಾತ್, ಜೆ ಕೊನಾಚಿ ಪೊರಾ ಗುಲಾಮಪಾನಾತ್ ಜಲಮ್ಲಾತ್ ತಿ ಹಾಗಾರಾ ಅನಿ ತಿ ಸಿನಾಯ್ ಮಡ್ಡಿ ವರ್‍ತಿ ಕರಲ್ಲೊ ಕರಾರ್ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:24
24 ತಿಳಿವುಗಳ ಹೋಲಿಕೆ  

ಹಾಗರ್ ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತ. ಅವಳು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆ ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.


ಹೀಗೆ - ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕಾದಿಯಿಂದ ಮರೆಯಾಗಿದ್ದವುಗಳನ್ನು ಹೊರಪಡಿಸುವೆನು ಎಂದು ಒಬ್ಬ ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಡುವಲಿಂದ ನಡುಗುತ್ತಾ ಬರುವರು;


ಅಬ್ರಹಾಮನಿಗೆ ಸಾರಳ ದಾಸಿಯಾದ ಐಗುಪ್ತ್ಯಳಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.


ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವಳು - ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ ಅಂದಳು.


ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ತನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸ ಸಮರ್ಥನಾಗಿದ್ದಾನೆಂದು ತಿಳುಕೊಂಡನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.


ಯೇಸು ಆಣೆಯೊಡನೆಯೇ ಯಾಜಕನಾದದರಿಂದ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ.


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೆ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ ಎಂಬದಾಗಿ ಅರಿಕೆಮಾಡಿದೆನು.


ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದವರ ಬಾಲಬೋಧೆಗೆ ಅಧೀನರಾಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು