Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:7 - ಕನ್ನಡ ಸತ್ಯವೇದವು J.V. (BSI)

7 ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ಬಾಧ್ಯನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದ್ದರಿಂದ, ದೇವರ ಅನುಗ್ರಹದಿಂದಲೇ ನೀನು ಇನ್ನು ಮನೆಯಾಳಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ನೀನು ವಾರಸುದಾರನೂ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಈಗ ನೀನು ಮೊದಲಿನಂತೆ ಗುಲಾಮನಲ್ಲ. ನೀನು ದೇವರ ಮಗನು. ನೀನು ದೇವರ ಮಗನಾಗಿರುವುದರಿಂದ ಆತನು ನಿನ್ನನ್ನು ಬಾಧ್ಯಸ್ತನನ್ನಾಗಿಯೂ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ ಪುತ್ರನಾಗಿದ್ದೀ. ನೀನು ದೇವರ ಮಗು ಎಂದ ಮೇಲೆ ದೇವರ ಮೂಲಕ ವಾರಸುದಾರನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಶೆ ರ್‍ಹಾತಾನಾ, ತುಮಿ ಅನಿ ಫಿಡೆ ಗುಲಾಮ್ ನ್ಹಯ್, ತುಮಿ ಪೊರಾ. ತಸೆ ಮನುನ್ ದೆವ್ ತುಮ್ಕಾ ಅಪ್ನಾಚ್ಯಾ ವಾರಿಸ್ದಾರಾಕ್ ದಿತಲೆ ಸಗ್ಳೆ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:7
19 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರೂ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.


ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಧರ್ಮಪತ್ನಿಯ ಮಕ್ಕಳೇ ಎಂದು ತಿಳುಕೊಳ್ಳಿರಿ.


ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ.


ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ನನ್ನ ಪಾಲೂ ಪಾನವೂ ಯೆಹೋವನೇ; ನೀನೇ ನನ್ನ ಸ್ವಾಸ್ತ್ಯವನ್ನು ಭದ್ರಗೊಳಿಸುತ್ತೀ.


ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು