Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:11 - ಕನ್ನಡ ಸತ್ಯವೇದವು J.V. (BSI)

11 ನಾನಾದರೆ ಸಹೋದರರೇ, ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ಹೋಯಿತಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಹೋದರರೇ, ಸುನ್ನತಿಮಾಡಿಸಿಕೊಳ್ಳುವುದು ಅವಶ್ಯಕವೆಂದು ನಾನು ಇನ್ನೂ ಬೋಧಿಸುತ್ತಿರುವುದಾಗಿ ಕೆಲವರು ಹೇಳುತ್ತಿದ್ದಾರಲ್ಲವೇ? ಹಾಗೆ ಬೋಧಿಸುತ್ತಿರುವುದಾದರೆ ನಾನೇಕೆ ಹೀಗೆ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗುತ್ತಿತ್ತು? ನಾನು ಹಾಗೇನಾದರೂ ಬೋಧಿಸಿದ್ದರೆ, ಶಿಲುಬೆಯ ಸಂದೇಶದಿಂದ ಯಾವ ಅಡ್ಡಿ ಆತಂಕವೂ ಉಂಟಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಸಹೋದರ ಸಹೋದರಿಯರೇ, ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನು ಬೋಧಿಸುವುದಿಲ್ಲ. ಸುನ್ನತಿಯ ಅಗತ್ಯತೆಯನ್ನು ಕುರಿತು ಉಪದೇಶಿಸುವವನಾಗಿದ್ದರೆ, ನಾನಿನ್ನೂ ಹಿಂಸೆಗೆ ಒಳಗಾಗಿರುವುದೇಕೆ? ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನಿನ್ನೂ ಉಪದೇಶಿಸುವುದಾಗಿದ್ದರೆ, ಶಿಲುಬೆಯ ವಿಷಯವಾದ ನನ್ನ ಬೋಧನೆಗೆ ಅಡ್ಡಿಯಾಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ಭಾವಾನು ಅನಿ ಭೆನಿಯಾನು, ಮಿಯಾ ಅಜುನ್‍ಬಿ ಸುನ್ನತಿಚ್ಯಾ ವಿಶಯಾತ್ ಪರ್ಗಟ್ ಕರ್‍ತಾ ಹೊಲ್ಯಾರ್; ಮಿಯಾ ಅಜುನ್‍ಬಿ ತರಾಸ್ ಸೊಸುಕ್ ಪಾಜೆ? ತೆ ಖರೆ ಹೊಯ್ ಹೊಲ್ಯಾರ್, ಮಿಯಾ ಕ್ರಿಸ್ತಾಚ್ಯಾ ಕುರ್ಸಾಚ್ಯಾ ವಿಶಯಾತ್ ಪರ್ಗಟ್ ಕರ್‍ತಲೆ ಕಸ್ಲ್ಯಾಬಿ ತರಾಸಾಕ್ ಕಾರನ್ ಹೊಯ್ನಾ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:11
17 ತಿಳಿವುಗಳ ಹೋಲಿಕೆ  

ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. ಇಂಥ ಕ್ರಿಸ್ತನ ಸಂಗತಿಯು ಯೆಹೂದ್ಯರಿಗೆ ವಿಘ್ನವೂ ಅನ್ಯಜನರಿಗೆ ಹುಚ್ಚುಮಾತೂ ಆಗಿದೆ;


ಬಹಿರಾಚಾರಗಳಿಂದ ಮಾನಪಡೆಯಬೇಕೆಂದಿರುವವರು ಸುನ್ನತಿಮಾಡಿಸಿಕೊಳ್ಳಿರಿ ಎಂಬದಾಗಿ ನಿಮ್ಮನ್ನು ಬಲಾತ್ಕರಿಸುತ್ತಾರೆ. ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದೊಂದೇ ಅವರ ಉದ್ದೇಶ.


ಆದರೆ ಪೂರ್ವದಲ್ಲಿ ಸ್ವಾಭಾವಿಕವಾಗಿ ಹುಟ್ಟಿದವನು ದೇವರಾತ್ಮ ಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಅದೆ.


ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡಲಿಲ್ಲ.


ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿದ್ದೇವೆ?


ನೀನು ಅನ್ಯಜನರಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ - ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ ಮೋಶೆಯ ಧರ್ಮವನ್ನು ತ್ಯಾಗಮಾಡಬೇಕೆಂಬದಾಗಿ ಬೋಧಿಸುತ್ತೀ ಎಂದು ನಿನ್ನ ವಿಷಯದಲ್ಲಿ ಬಹಳವಾಗಿ ಕೇಳಿದ್ದಾರೆ.


ಇನ್ನು ಮೇಲೆ ಯಾರೂ ನನ್ನನ್ನು ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುವಿನ ಮುದ್ರೆಗಳು ಹಾಕಿರುತ್ತವಲ್ಲಾ.


ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ.


ಇಸ್ರಾಯೇಲ್ ಜನರೇ, ಸಹಾಯಮಾಡಿರಿ, ನಮ್ಮ ಜನರಿಗೂ ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ ಎಂದು ಕೂಗಿದರು.


ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿವಿುತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.


ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಯೆರೂಸಲೇವಿುನ ನಿವಾಸಿಗಳಿಗೆ ಬಲೆಯೂ ಬೋನೂ ಆಗುವನು.


ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು