Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:13 - ಕನ್ನಡ ಸತ್ಯವೇದವು J.V. (BSI)

13 ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ಮಾಜ್ಯಾ ಭೆನಿಯಾನು ಭಾವಾನು, ದೆವಾನ್ ತುಮ್ಕಾ ಸ್ವತಂತ್ರ್ ರ್‍ಹಾವ್ಚೆ ಮನುನ್ ಬಲ್ವಲ್ಲೆ ಹಾಯ್, ಖರೆ ಹೆ ಸ್ವತಂತ್ರ್ ತುಮ್ಚ್ಯಾ ಆಂಗಾಚ್ಯಾ ಆಶಾತ್ ಪಡುಕ್ ಎಕ್ ಕಾರನ್ ಹೊವ್ಕ್ ದಿವ್ನಕಾಸಿ. ಹೆಚ್ಯಾ ಬದ್ಲಾಕ್ ಪ್ರೆಮಾನ್ ಎಕಾಮೆಕಾಚಿ ಸೆವಾ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:13
31 ತಿಳಿವುಗಳ ಹೋಲಿಕೆ  

ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ;


ನಾನು ಎಲ್ಲಾ ವಿಷಯದಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನನ್ನನ್ನು ಎಲ್ಲರಿಗೂ ಅಧೀನಮಾಡಿದೆನು.


ಆದರೂ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲವಿಲ್ಲದವರಿಗೆ ಒಂದು ವೇಳೆ ವಿಘ್ನವಾದೀತು, ಎಚ್ಚರಿಕೆಯಾಗಿರಿ.


ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಕವಾಗಿದೆ.


ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವದಕ್ಕೆ ಸೋತು ಹೋಗಿರುವನೋ ಅದರ ದಾಸತ್ವದೊಳಗಿರುವನಷ್ಟೆ.


ನಮ್ಮನ್ನೇ ಪ್ರಸಿದ್ಧಿಪಡಿಸಿಕೊಳ್ಳದೆ ನಮ್ಮನ್ನು ಯೇಸುವಿನ ನಿವಿುತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಪ್ರಸಿದ್ಧಿಪಡಿಸುತ್ತೇವೆ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಅದರಲ್ಲಿ ಬರೆದಿರುವದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು; ಒಬ್ಬನು ತೊತ್ತಿನಿಂದ ಹುಟ್ಟಿದವನು, ಒಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು.


ನಾನಂತೂ ನನಗಿರುವದನ್ನು ನಿಮ್ಮ ಆತ್ಮಸಂರಕ್ಷಣೆಗೋಸ್ಕರ ಅತಿಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರೋ?


ಆ ಕರ್ತನು ದೇವರಾತ್ಮನೇ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.


ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು