Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:14 - ಕನ್ನಡ ಸತ್ಯವೇದವು J.V. (BSI)

14 ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೀವು ನಿಮ್ಮನ್ನು ಪ್ರೀತಿಸುವಂತೆ ಇತರರನ್ನು ಪ್ರೀತಿಸಿರಿ” ಎಂಬ ಒಂದೇ ಒಂದು ಆಜ್ಞೆಯಲ್ಲಿ ಇಡೀ ಧರ್ಮಶಾಸ್ತ್ರವೇ ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ನಿಯಮವೆಲ್ಲಾ ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ಕಶ್ಯಾಕ್ ಮಟ್ಲ್ಯಾರ್ ತುಮಿ ತುಮ್ಚೊ ಕರ್ತ್ಯಾಶಿ ತಸೊ ತುಮ್ಚ್ಯಾ ಅಜುಭಾಜುಚ್ಯಾಂಚೊ ಪ್ರೆಮ್ ಕರಾ” ಮನ್ತಲ್ಯಾ ಖಾಯ್ದ್ಯಾ ವರ್‍ತಿ ಸಗ್ಳೆ ಮೊಯ್ಜೆಚೆ ಖಾಯ್ದೆ ಇಬೆ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:14
14 ತಿಳಿವುಗಳ ಹೋಲಿಕೆ  

ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.


ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.


ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ; ಏನಂದರೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು; ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬದೇ.


ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ ಎರಡನೆಯ ಆಜ್ಞೆ; ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ ಎಂದು ಉತ್ತರಕೊಟ್ಟನು.


ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ಆತನನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸುವದು ಮತ್ತು ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಹೆಚ್ಚಿನವು ಅಂದನು.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯನ್ನು ಹಿಡಿದಿರುವದಕ್ಕೆ ಆಶ್ಚರ್ಯಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು